ಮಿಲ್ಕಿ ಬ್ಯೂಟಿ ತಮನ್ನಾಗೂ ಒಕ್ಕರಿಸಿದ ಕೊರೊನಾ ಸೋಂಕು!
ಬಾಹುಬಲಿ ಖ್ಯಾತಿಯ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಅವರಿಗೂ ಕೊರೋನಾ ಸೋಂಕು ಒಕ್ಕರಿಸಿದ್ದು, ಪ್ರಸ್ತುತ ಅವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಮುಂಬೈ: ಬಾಹುಬಲಿ ಖ್ಯಾತಿಯ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಅವರಿಗೂ ಕೊರೋನಾ ಸೋಂಕು ಒಕ್ಕರಿಸಿದ್ದು, ಪ್ರಸ್ತುತ ಅವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಯುಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದ್ದು, ಕೆಲವು ದಿನಗಳ ಹಿಂದೆ ತಮನ್ನಾ ಅವರ ತಂದೆ ತಾಯಿಗಳಿಗೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಕಾರಣ ತಮನ್ನಾ ತಮ್ಮ ಕುಟುಂಬ ಹಾಗೂ ಎಲ್ಲ ಸಿಬ್ಬಂದಿಗೆ ಕೊರೊನಾ ಪರೀಕ್ಷೆ ಮಾಡಿಸಿದ್ದರು. ಈ ಪರೀಕ್ಷೆಯಲ್ಲಿ ತಂದೆ ತಾಯಿಗೆ ಪಾಸಿಟಿವ್ ಬಂದಿದ್ದು.. ತಮನ್ನಾ ಸೇರಿ ಸಿಬ್ಬಂದಿಗೆ ನೆಗೆಟಿವ್ ಬಂದಿತ್ತು. ಇತ್ತೀಚಿಗೆ ತಮನ್ನಾ ತಂದೆ ತಾಯಿ ಕೊರೊನಾದಿಂದ ಚೇತರಿಸಿಕೊಂಡು ಈಗ ಆರೋಗ್ಯದಿಂದಿದ್ದಾರೆ. ಆದರೆ ಈಗ ತಮನ್ನಾ ಅವರಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮತ್ತೆ ಅವರು ಪರೀಕ್ಷೆಗೆ ಒಳಗಾಗಿದ್ದರು. ಇದೀಗ ಅವರ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿದ್ದು. ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ತಮ್ಮ ಅಚ್ಚು ಮೆಚ್ಚಿನ ನಟಿ ತಮನ್ನಾ ಗೆ ಕೊರೊನಾ ಸೋಂಕು ದೃಢಪಟ್ಟಿರುವ ವಿಷಯ ತಿಳಿದುಕೊಂಡ ಆಕೆಯ ಅಭಿಮಾನಿಗಳು ಅಘಾತಕ್ಕೀಡಾಗಿದ್ದು, ಶೀಘ್ರ ಚೇತರಿಸಿಕೊಳ್ಳುವಂತೆ ಪ್ರಾರ್ಥಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


