ಸಿನಿಮಾ ಸುದ್ದಿ

ಅಂತಿಮ ಹಂತದ ಚಿತ್ರೀಕರಣದಲ್ಲಿ 'ಬಡವ ರಾಸ್ಕಲ್'

ಡಾಲಿ ಧನಂಜಯ ನಾಯಕನಾಗಿ ನಟಿಸುತ್ತಿರುವ ಬಡವ ರಾಸ್ಕರ್ ಚಿತ್ರದ ಚೀತ್ರೀಕರಣ ಬಹುತೇಕ ಪೂರ್ಣಗೊಂಡಿದ್ದು, ಚಿತ್ರತಂಡ ಅಂತಿಮ ಹಂತದ ಚಿತ್ರೀಕರಣದಲ್ಲಿ ಬ್ಯೂಸಿಯಾಗಿದೆ.

ಅಂತಿಮ ಹಂತದ ಚಿತ್ರೀಕರಣದಲ್ಲಿ 'ಬಡವ ರಾಸ್ಕಲ್'
ಬಡವ ರಾಸ್ಕಲ್ ಚಿತ್ರದ ಸ್ಟಿಲ್
Published On :

ಡಾಲಿ ಧನಂಜಯ ನಾಯಕನಾಗಿ ನಟಿಸುತ್ತಿರುವ ಬಡವ ರಾಸ್ಕರ್ ಚಿತ್ರದ ಚೀತ್ರೀಕರಣ ಬಹುತೇಕ ಪೂರ್ಣಗೊಂಡಿದ್ದು, ಚಿತ್ರತಂಡ ಅಂತಿಮ ಹಂತದ ಚಿತ್ರೀಕರಣದಲ್ಲಿ ಬ್ಯೂಸಿಯಾಗಿದೆ. 

ಚಿತ್ರದ ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ಮಾತ್ರ ಬಾಕಿಯಿದ್ದು, ಕ್ಲೈಮ್ಯಾಕ್ಸ್ ಚಿತ್ರೀಕರಣ ಬೆಂಗಳೂರಿನಲ್ಲಿ ಅಕ್ಟೋಬರ್ 10ವರೆಗೂ ನಡೆಯಲಿದೆ. ಬಾಲಾಜಿ ಡಿಜಿಟಲ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದ್ದು, ಚಿತ್ರದ ಬಹುತೇಕ ಚಿತ್ರೀಕರಣ ಬೆಂಗಳೂರು, ಮೈಸೂರು ಹಾಗೂ ಪಾಂಡವಪುರದಲ್ಲಿ ಚಿತ್ರೀಕರಣ ನಡೆದಿದೆ.

ಮಧ್ಯಮ ವರ್ಗದ ಜನರ ದಿನನಿತ್ಯದ ಜೀವನದಲ್ಲಿ ನಡೆಯುವ ಘಟನೆಗಳೇ ಈ ಚಿತ್ರದ ಕಥಾಹಂದರ. ಡಾಲಿ ಪಿಕ್ಚರ್ಸ್ ಲಾಂಛನದಲ್ಲಿ ಸಾವಿತ್ರಮ್ಮ ಅಡವಿಸ್ವಾಮಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಶಂಕರ್ ಗುರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಕಥೆ, ಚಿತ್ರಕಥೆ, ಸಂಭಾಷಣೆಯನ್ನು ಶಂಕರ್ ಗುರು ಅವರೆ ಬರೆದಿದ್ದಾರೆ. ಬಡವ ರಾಸ್ಕಲ್ ಇವರಿಗೆ ಚೊಚ್ಚಲ ನಿರ್ದೇಶನದ ಚಿತ್ರ. ಡಾಲಿ ಧನಂಜಯ ಹಾಗೂ ಶಂಕರ್ ಗುರು ಈ ಚಿತ್ರದ ಹಾಡುಗಳನ್ನು ಬರೆದಿದ್ದು, ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ.

ಪ್ರೀತ ಜಯರಾಮನ್ ಛಾಯಾಗ್ರಹಣ, ನಿರಂಜನ್ ದೇವರಮನೆ ಸಂಕಲನ ಹಾಗೂ ವಿನೋದ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಡಾಲಿ ಧನಂಜಯ ಅವರಿಗೆ ನಾಯಕಿಯಾಗಿ ಅಮೃತ ಅಯ್ಯಂಗಾರ್ ಅಭಿನಯಿಸುತ್ತಿದ್ದಾರೆ. ರಂಗಾಯಣ ರಘು, ತಾರಾ, ಸ್ಪರ್ಶ ರೇಖಾ, ನಾಗಭೂಷಣ್, ಪೂರ್ಣಚಂದ್ರ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ‌.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.