ಸ್ವಂತ ಪ್ರೊಡಕ್ಷನ್ ಹೌಸ್ ಪ್ರಾರಂಭಿಸಿದ 'ರಾಬರ್ಟ್' ನಿರ್ದೇಶಕ ತರುಣ್ ಕಿಶೋರ್ ಸುಧೀರ್
ರಾಬರ್ಟ್ ಚಿತ್ರ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಸ್ವಂತ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸಿದ್ದಾರೆ. ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ತರುಣ್ ಸುಧೀರ್ ಕ್ರಿಯೇಟಿವ್ಜ್ ಎಂಬ ಹೆಸರಿನ ಪ್ರೊಡಕ್ಷನ್ ಹೌಸ್ ನ್ನು ಘೋಷಿಸಿದ್ದಾರೆ.

ಬೆಂಗಳೂರು: ರಾಬರ್ಟ್ ಚಿತ್ರ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಸ್ವಂತ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸಿದ್ದಾರೆ. ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ತರುಣ್ ಸುಧೀರ್ ಕ್ರಿಯೇಟಿವ್ಜ್ ಎಂಬ ಹೆಸರಿನ ಪ್ರೊಡಕ್ಷನ್ ಹೌಸ್ ನ್ನು ಘೋಷಿಸಿದ್ದಾರೆ.
2017 ರಲ್ಲಿ ಚೊಚ್ಚಲ ಬಾರಿಗೆ ಚೌಕ ಚಿತ್ರ ನಿರ್ದೇಶಿಸಿದ ತರುಣ್, ಇದಕ್ಕೂ ಮುಂಚೆ ಅನೇಕ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಉಮಾಪತಿ ಗೌಡ ನಿರ್ಮಿಸಿ ದರ್ಶನ್ ಅಭಿನಯಿಸಿರುವ ರಾಬರ್ಟ್ ಅವರ ನಿರ್ದೇಶನದ ಎರಡನೇ ಸಿನಿಮಾವಾಗಿದ್ದು, ಬಿಡುಗಡೆಗೆ ಸಜ್ಜಾಗಿದೆ.
ಜಗದೀಶ್ ಕುಮಾರ್ ಹಂಪಿ ನಿರ್ದೇಶಿಸುತ್ತಿರುವ ಶರಣ್ ಅಭಿನಯದ ಮುಂದಿನ ಚಿತ್ರದಲ್ಲಿ ತರುಣ್ ಸಹ ನಿರ್ಮಾಪಕರಾಗಿದ್ದು, ನಟ ಶರಣ್ ಒಡೆತನದ ಪ್ರೊಡಕ್ಷನ್ ಹೌಸ್ ಆಗಿರುವ ಲಾಡ್ಡೂ ಸಿನೆಮಾಸ್ ಸಹಯೋಗದೊಂದಿಗೆ ನಿರ್ಮಿಸಲಾಗುತ್ತಿರುವ ಚಿತ್ರಗಳ ಕ್ರಿಯಾತ್ಮಕ ವಿಭಾಗದ ಮುಖ್ಯಸ್ಥರು ಕೂಡಾ ಆಗಿದ್ದಾರೆ.
ಶರಣ್ ಅವರ 100ನೇ ಚಿತ್ರ ರಾಂಬೋದಿಂದ ಅವರೊಂದಿಗೆ ಇದ್ದು, ರಾಂಬೋ 2 ಚಿತ್ರದ ಸಹ ನಿರ್ಮಾಪಕನಾಗಿದ್ದೇನೆ.ಈ ಚಿತ್ರವನ್ನು ಜಗದೀಶ್ ಕುಮಾರ್ ನಿರ್ದೇಶಿಸುತ್ತಿದ್ದಾರೆ. ಸುನ್ನಿಯ 'ಅವತಾರ ಪುರುಷ' ಚಿತ್ರೀಕರಣ ಮುಗಿದ ಬಳಿಕ ನವೆಂಬರ್ ತಿಂಗಳಲ್ಲಿ ಈ ಚಿತ್ರದ ಚಿತ್ರೀಕರಣ ಆರಂಭಿಸಲು ತಂಡ ಯೋಜಿಸಿರುವುದಾಗಿ ತರುಣ್ ಕಿಶೋರ್ ಸುಧೀರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


