ರಾಧಿಕಾ ಕುಮಾರಸ್ವಾಮಿ ಅಭಿನಯದ 'ದಮಯಂತಿ' ದಸರಾ ಹಬ್ಬಕ್ಕೆ ರೀ-ರಿಲೀಸ್
ರಾಧಿಕಾ ಕುಮಾರಸ್ವಾಮಿ ಅಭಿನಯದ 'ದಮಯಂತಿ' ಚಿತ್ರ ಕಳೆದ ವರ್ಷ ಬಿಡುಗಡೆಯಾಗಿ ಜನರ ಮೆಚ್ಚುಗೆಗೆ ಪಾತ್ರವಾಗಿತ್ತು.

ರಾಧಿಕಾ ಕುಮಾರಸ್ವಾಮಿ ಅಭಿನಯದ 'ದಮಯಂತಿ' ಚಿತ್ರ ಕಳೆದ ವರ್ಷ ಬಿಡುಗಡೆಯಾಗಿ ಜನರ ಮೆಚ್ಚುಗೆಗೆ ಪಾತ್ರವಾಗಿತ್ತು.
ಕೊರೋನಾ ಹಾವಳಿಯಿಂದ ಕೆಲವು ತಿಂಗಳ ಕಾಲ ಚಿತ್ರಮಂದಿರಗಳ ಬಾಗಿಲು ಮುಚ್ಚಿತ್ತು. ಈಗ ಸರ್ಕಾರ ಕೆಲವು ನಿಯಮಗಳನ್ನು ಪಾಲಿಸಿ ಚಿತ್ರಮಂದಿರ ತೆರೆಯಲು ಅನುಮತಿ ನೀಡಿದೆ. ಹೀಗಾಗಿ ಪ್ರಸ್ತುತ ನಾಡಹಬ್ಬ ದಸರಾ ಸಮಯವಾಗಿರುವುದರಿಂದ ಅಭಿಮಾನಿಗಳು ದಮಯಂತಿ ಚಿತ್ರವನ್ನು ಮರು ಬಿಡುಗಡೆ ಮಾಡಲು ಒತ್ತಾಯಿಸಿದ್ದಾರೆ. ಅವರ ಒತ್ತಾಯದ ಮೇರೆಗೆ ಅಕ್ಟೋಬರ್ 23ರಂದು ದಮಯಂತಿ ಚಿತ್ರ ಮರು ಬಿಡುಗಡೆ ಮಾಡಲು ನಿಶ್ಚಯಿಸಿರುವುದಾಗಿ ಚಿತ್ರದ ನಿರ್ದೇಶಕ ಹಾಗೂ ನಿರ್ಮಾಪಕ ನವರಸನ್ ತಿಳಿಸಿದ್ದಾರೆ.
ಶ್ರೀ ಲಕ್ಷ್ಮೀ ವೃಷಾದ್ರಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ರಾಧಿಕಾ ಕುಮಾರಸ್ವಾಮಿ, ಸಾಧುಕೋಕಿಲ, ಭಜರಂಗಿ ಲೋಕಿ, ತಬಲ ನಾಣಿ, ಮಜಾಟಾಕೀಸ್ ಪವನ್ ಮುಂತಾದವರು ನಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


