ಹಾಡುಹಗಲೇ ತುಳು ಚಿತ್ರ ನಟ ತುಳು ಚಿತ್ರ ನಟ, ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಕೊಚ್ಚಿ ಬರ್ಬರ ಹತ್ಯೆ!
ಸುವರ್ಣದೀರ್ಘ ಸಂಧಿ ಸೇರಿದಂತೆ ಕೆಲ ತುಳು ಚಿತ್ರಗಳಲ್ಲಿ ಅಭಿನಯಿಸಿರುವ ತುಳು ಚಿತ್ರ ನಟ, ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಅವರನ್ನು ಹಾಡುಹಗಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಮಂಗಳೂರು: ಸುವರ್ಣದೀರ್ಘ ಸಂಧಿ ಸೇರಿದಂತೆ ಕೆಲ ತುಳು ಚಿತ್ರಗಳಲ್ಲಿ ಅಭಿನಯಿಸಿರುವ ತುಳು ಚಿತ್ರ ನಟ, ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಅವರನ್ನು ಹಾಡುಹಗಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಬಿ.ಸಿ.ರೋಡ್ ನ ಫ್ಲ್ಯಾಟ್ ಒಂದರಲ್ಲಿ ಸುರೇಂದ್ರ ಬಂಟ್ವಾಳ್ ಎಂಬವರ ಹತ್ಯೆ ಮಾಡಲಾಗಿದೆ. ಕಳೆದ ರಾತ್ರಿ ಘಟನೆ ನಡೆದಿದ್ದು, ಇಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
2018ರಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಬಂಟ್ವಾಳ ಪೇಟೆಯಲ್ಲಿ ನಡೆದ ತಲವಾರು ದಾಳಿ ಪ್ರಕರಣದಲ್ಲಿ ಸುರೇಂದ್ರ ಬಂಟ್ವಾಳ್ ಹೆಸರು ಕೇಳಿಬಂದಿತ್ತು. ಬಳಿಕ ಅವರನ್ನು ಕಾಸರಗೋಡಿನ ಕುಂಬ್ಳೆ ಬಳಿ ಪೊಲೀಸರು ಬಂಧಿಸಿ ಕರೆತಂದಿದ್ದರು.
ಈ ಹಿಂದೆ ಬಲಪಂಥೀಯ ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದ ಸುರೇಂದ್ರ ರೌಡಿಶೀಟರ್ ಆಗಿದ್ದು ಬಳಿಕ ಕಾಂಗ್ರೆಸ್ ಸೇರಿದ್ದರು. ಅವರು ಚಾಲಿಪೋಲಿಲು ತುಳು ಸಿನಿಮಾದಲ್ಲಿ ನಟಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


