2021 ರ ಜನವರಿಯಲ್ಲಿ 'ಶುಗರ್ ಫ್ಯಾಕ್ಟರಿ' ಕೆಲಸ ಆರಂಭಿಸಲಿದ್ದಾರೆ ನಟ ಕೃಷ್ಣ
ನಟ ಡಾರ್ಲಿಂಗ್ ಕೃಷ್ಣ ಸದ್ಯ ಲವ್ ಮಾಕ್ಟೇಲ್-2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಲವ್ ಮಾಕ್ಟೇಲ್ ಸಕ್ಸಸ್ ಬಳಿಕ ಪಾರ್ಟ್-2 ನಲ್ಲಿ ನಿರತರಾಗಿರುವ ಕೃಷ್ಣ ಅಭಿನಯದ ಜೊತೆಗೆ

ನಟ ಡಾರ್ಲಿಂಗ್ ಕೃಷ್ಣ ಸದ್ಯ ಲವ್ ಮಾಕ್ಟೇಲ್-2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಲವ್ ಮಾಕ್ಟೇಲ್ ಸಕ್ಸಸ್ ಬಳಿಕ ಪಾರ್ಟ್-2 ನಲ್ಲಿ ನಿರತರಾಗಿರುವ ಕೃಷ್ಣ ಅಭಿನಯದ ಜೊತೆಗೆ
ನಿರ್ದೇಶನದಲ್ಲೂ ಬ್ಯುಸಿಯಾಗಿದ್ದಾರೆ. ಲವ್ ಮಾಕ್ಟೇಲ್ ಸಿನಿಮಾ ಜೊತೆ ಡಾರ್ಲಿಂಗ್ ಕೃಷ್ಣ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
Shrikrishna@gmail.com ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ನಾಗಶೇಖರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಸಿನಿಮಾ ಇದಾಗಿದೆ. ಈ ಸಿನಿಮಾ ಜೊತೆಗೆ ಕೃಷ್ಣ 'ಶುಗರ್ ಫ್ಯಾಕ್ಟರಿ' ಎನ್ನುವ ಹೊಸ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಇತ್ತೀಚಿಗಷ್ಟೆ ಸಿನಿಮಾದ ಟೈಟಲ್ ಅನೌನ್ಸ್ ಮಾಡಿರುವ ಸಿನಿಮಾತಂಡ ಜನವರಿಯಿಂದ ಚಿತ್ರೀಕರಣ ಪ್ರಾರಂಭ ಮಾಡಲು ಸಿದ್ಧವಾಗಿದೆ.
ದಸರಾ ಸಂದರ್ಭದಲ್ಲಿ ಶುಗರ್ ಫ್ಯಾಕರಿ ಟೈಟಲ್ ಪ್ರಕಟಿಸಲಾಯಿತು. ಚಿತ್ರಕ್ಕೆ ದೀಪಕ್ ಅರಸ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ದೀಪಿಕ್ ಅರಸ್ ನಟಿ ಅಮೂಲ್ಯ ಅವರ ಸಹೋದರ. ಈ ಮೊದಲು ಮನಸಾಲಜಿ ಎನ್ನುವ ಸಿನಿಮಾ ನಿರ್ಮಾಣ ಮಾಡಿದ್ದರು. ವಿಭಿನ್ನ ಕಥಾಹಂದರ ಹೊಂದಿರುವ ಹಾಸ್ಯಭರಿತ ಸಿನಿಮಾ ಇದಾಗಿದೆಯಂತೆ. ಈ ಸಿನಿಮಾದಲ್ಲಿ ನಟಿಸಲು ಡಾರ್ಲಿಂಗ್ ಕೃಷ್ಣ ತುಂಬಾ ಎಕ್ಸೈಟ್ ಆಗಿರುವುದಾಗಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


