ಡ್ರಗ್ಸ್ ದಂಧೆ ಬಗ್ಗೆ ನಾನೊಬ್ಬ ಮೆಸೆಂಜರ್: ಡೋಂಟ್ ಕಿಲ್ ದಿ ಮೆಸೆಂಜರ್; ಇಂದ್ರಜಿತ್ ಲಂಕೇಶ್
ಸದ್ಯ ಕನ್ನಡ ಚಿತ್ರರಂಗದಲ್ಲಿ ಸದ್ದು ಮಾಡುತ್ತಿರುವ ಡ್ರಗ್ಸ್ ದಂಧೆ ಸಂಬಂಧ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದೂ ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾದರು.

ಬೆಂಗಳೂರು: ಸದ್ಯ ಕನ್ನಡ ಚಿತ್ರರಂಗದಲ್ಲಿ ಸದ್ದು ಮಾಡುತ್ತಿರುವ ಡ್ರಗ್ಸ್ ದಂಧೆ ಸಂಬಂಧ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದೂ ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾದರು.
ಸುಮಾರು 45 ನಿಮಿಷಗಳ ಕಾಲ ನಡೆದ ವಿಚಾರಣೆ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಲಂಕೇಶ್, ನಾನು ಒಬ್ಬ ಮೆಸೆಂಜರ್ ಅಷ್ಟೇ. ಸಿಸಿಬಿ ವಿಚಾರಣೆ ವಿಚಾರದಲ್ಲಿ ನಾನು ಏನು ಹೇಳಿದ್ದೇನೋ ಅದಕ್ಕೆ ನಾನು ಬದ್ಧವಾಗಿದ್ದೇನೆ. ಮಾಧ್ಯಮದಲ್ಲಿ ಏನು ಹೇಳಿದ್ದೇನೋ ಅದೆಲ್ಲವೂ ಸತ್ಯ. ಡ್ರಗ್ ಮಾಫಿಯಾ ವಿಚಾರದಲ್ಲಿ ನಾನು ಪೊಲೀಸರಿಗೆ ಪಾರಿವಾಳದಂತೆ ಮಾಹಿತಿ ನೀಡಿದ್ದೇನೆ ಎಂದು ತಿಳಿಸಿದರು. ನಾನು ನೀಡಿದ ಮಾಹಿತಿ ಆಧಾರದಂತೆ ಸಿಸಿಬಿ ಪೊಲೀಸರು ತನಿಖೆ ನಡೆಸಲಿದ್ದಾರೆ.
ನಮ್ಮ ತಂದೆ 30 ವರ್ಷಗಳಿಂದ ಚಿತ್ರರಂಗದಲ್ಲಿದ್ದರು. ನಾನು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದೇನೆ. 9 ಕನ್ನಡ ಸಿನಿಮಾ ನಿರ್ದೇಶನ ಮಾಡಿದ್ದೇನೆ. ನಾವು ಸಿನಿಮಾದವರೇ, ನಾವು ಚಿತ್ರರಂಗಕ್ಕೆ ಸೇರಿದ್ದೇವೆ. ಚಿತ್ರರಂಗದ ಒಳಿತಿಗಾಗಿ ಈ ವಿಚಾರದಲ್ಲಿ ಬಹಿರಂಗವಾಗಿ ಮಾತನಾಡುತ್ತಿದ್ದೇನೆ ಎಂದು ತಿಳಿಸಿದರು. ಕನ್ನಡ ಸಿನಿಮಾ ಇಂಡಸ್ಟ್ರಿ ಕ್ಲೀನ್ ಆಗಬೇಕು ಎಂದು ಆಶಯ ವ್ಯಕ್ತ ಪಡಿಸಿದ್ದಾರೆ.
ನಾನು ಕೊಟ್ಟಿರುವ ಮಾಹಿತಿ ಆಧರಿಸಿ ಪೋಲೀಸರಿಗೆ ಸರಿಯಾಗಿ ತನಿಖೆ ಮಾಡಬೇಕು. ನೀಡಿದ ಮಾಹಿತಿಯನ್ನ ಆಧರಿಸಿ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ನನ್ನ ಪರ ವಿರೋಧದ ಚರ್ಚೆ ಯ ಬಗ್ಗೆ ನಾನು ಮಾತನಾಡುವುದಿಲ್ಲ. ಈ ಒಂದು ಪ್ರಕರಣದಿಂದ ಕಾನೂನಿನ ರೀತಿಯಲ್ಲಿ , ಚಿತ್ರರಂಗಕ್ಕೆ ಒಳ್ಳೆಯದಾದರೆ ಅದೇ ನನಗೆ ದೊಡ್ಡ ಸಂತೋಷ. ಮುಂದಾದರೂ ಆ ಕಳಂಕ ಬಾರದಂತೆ ನೋಡಿಕೊಳ್ಳಿ ಎಂದು ಇಂದ್ರಜಿತ್ ಲಂಕೇಶ್ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


