ಕುಡಿದ ಅಮಲಿನಲ್ಲಿ ನಟ ಹರ್ಷ ಗಲಾಟೆ: ಬುದ್ದಿವಾದ ಹೇಳಿ ಕಳುಹಿಸಿದ ಪೊಲೀಸರು
ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಪ್ರಕರಣ ಹೊಗೆಯಾಡುತ್ತಿರುವ ಬೆನ್ನಲ್ಲೇ ನಟನೋರ್ವ ಕುಡಿದ ಮತ್ತಿನಲ್ಲಿ ಪೊಲೀಸರೊಂದಿಗೆ ಗಲಾಟೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಪ್ರಕರಣ ಹೊಗೆಯಾಡುತ್ತಿರುವ ಬೆನ್ನಲ್ಲೇ ನಟನೋರ್ವ ಕುಡಿದ ಮತ್ತಿನಲ್ಲಿ ಪೊಲೀಸರೊಂದಿಗೆ ಗಲಾಟೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ತಡರಾತ್ರಿ ರಾಜಾಹುಲಿ, ವರ್ಧನ ಸೇರಿ ಹಲವು ಚಿತ್ರಗಳಲ್ಲಿ ಅಭಿನಯಿಸಿರುವ ಸ್ಯಾಂಡಲ್ ವುಡ್ ನಟ ಹರ್ಷ ಖಾಸಗಿ ಅಪಾರ್ಟ್ಮೆಂಟ್ ಬಳಿ ಗೆಳೆಯರೊಂದಿಗೆ ಪಾನಗೋಷ್ಠಿ ಮಾಡುತ್ತಿದ್ದರು. ಈ ವೇಳೆ ಬೀಟ್ ನಲ್ಲಿದ್ದ ಬಾಗಲಗುಂಟೆ ಪೊಲೀಸರು ಓಪನ್ ಏರಿಯಾದಲ್ಲಿ ಮದ್ಯ ಸೇವೆನೆ ಮಾಡದಂತೆ ಸೂಚಿಸಿದರು.
ಇದೇ ವಿಚಾರಕ್ಕೆ ಕುಡಿದ ಮತ್ತಿನಲ್ಲಿದ್ದ ನಟ ಹರ್ಷ, ಅವರ ಜೊತೆಗಿದ್ದ ಸ್ನೇಹಿತರರು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದರು. ಈ ಸಂದರ್ಭದಲ್ಲಿ ತಕ್ಷಣವೇ ಪೊಲೀಸರು ನಟ ಹರ್ಷ ಹಾಗೂ ಆತನ ಗೆಳೆಯರನ್ನು ವಶಕ್ಕೆ ಪಡೆದು, ನಂತರ ಮತ್ತೊಮ್ಮೆ ಹೀಗೆ ಮಾಡದಂತೆ ಎಚ್ಚರಿಕೆ ನೀಡಿ ಬಿಟ್ಟು ಕಳುಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


