ಕೊರೋನಾ ಗೆದ್ದ ಗಾನ ಗಂಧರ್ವ ಎಸ್ ಪಿ ಬಾಲಸುಬ್ರಮಣ್ಯಂ!
ಗಾನ ಗಂಧರ್ವ ಎಸ್ ಪಿ ಬಾಲಸುಬ್ರಮಣ್ಯಂ ಅವರಿಗೆ ಹೊಸದಾಗಿ ನಡೆಸಿದ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ ಎಂದು ಅವರ ಪುತ್ರ ಎಸ್ ಪಿ ಚರಣ್ ಹೇಳಿದ್ದಾರೆ.

ಚೆನ್ನೈ: ಗಾನ ಗಂಧರ್ವ ಎಸ್ ಪಿ ಬಾಲಸುಬ್ರಮಣ್ಯಂ ಅವರಿಗೆ ಹೊಸದಾಗಿ ನಡೆಸಿದ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ ಎಂದು ಅವರ ಪುತ್ರ ಎಸ್ ಪಿ ಚರಣ್ ಹೇಳಿದ್ದಾರೆ.
ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ದಾಖಲಾಗಿರುವ ಡಾ. ಎಸ್ ಪಿ ಬಿ ಅವರಿಗೆ ಕಳೆದ ಕೆಲವು ದಿನಗಳಿಂದ ವಿದೇಶಿ ವೈದ್ಯರಿಂದ ಚಿಕಿತ್ಸೆ ಕಲ್ಪಿಸಲಾಗುತ್ತಿದೆ.
ಈ ಕ್ರಮವಾಗಿ ಅವರಿಗೆ ಹೊಸದಾಗಿ ನಡೆಸಲಾದ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ. ಆದರೆ ತಂದೆಯವರ ಶ್ವಾಸಕೋಶದಲ್ಲಿ ಇನ್ನೂ ಸ್ವಲ್ಪ ಸೋಂಕಿದ್ದು, ಇನ್ನೊಂದು ವಾರದಲ್ಲಿ ಪೂರ್ಣವಾಗಿ ಚೇತರಿಸಿಕೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
74 ವರ್ಷದ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಗಸ್ಟ್ 5ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಸತತ 32 ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಅವರು ಬಹುಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


