ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ: ನಟಿ ಸಂಜನಾ 5 ದಿನ ಸಿಸಿಬಿ ಕಸ್ಟಡಿಗೆ
ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ ಅವರನ್ನು 8ನೇ ಎಸಿಎಂಎಂ ನ್ಯಾಯಾಲಯ ಐದು ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿ ಆದೇಶಿಸಿದೆ.

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ ಅವರನ್ನು 8ನೇ ಎಸಿಎಂಎಂ ನ್ಯಾಯಾಲಯ ಐದು ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿ ಆದೇಶಿಸಿದೆ.
ಪ್ರಕರಣದಲ್ಲಿ ಎ14 ಆರೋಪಿಯಾಗಿರುವ ಸಂಜನಾ ಅವರನ್ನು ಮಂಗಳವಾರ ಬೆಳಗ್ಗೆ ವಶಕ್ಕೆ ಪಡೆದಿದ್ದ ಸಿಸಿಬಿ ಪೊಲೀಸರು, ಸುಮಾರು ಮೂರು ಗಂಟೆಗಳ ಕಾಲ ತೀವ್ರ ವಿಚಾರಣೆ ನಡೆಸಿದರು. ಬಳಿಕ ನಟಿಯನ್ನು ವೈದ್ಯಕೀಯ ಪರೀಕ್ಷೆ ಒಳಪಡಿಸಿದ ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.
ಆರೋಪಿಯ ವಿಚಾರಣೆ ನಡೆಸಿದ 8ನೇ ಎಸಿಎಂಎಂ ಕೋರ್ಟ್ ಹೆಚ್ಚಿನ ವಿಚಾರಣೆಗಾಗಿ ನಟಿಯನ್ನು ಐದು ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿದೆ.
ಬೆಂಗಳೂರಿನಲ್ಲಿ ಇವೆಂಟ್ ಮ್ಯಾನೇಜ್ಮೆಂಟ್ ನಡೆಸುತ್ತಿದ್ದ ಪೃಥ್ವಿ ಶೆಟ್ಟಿ ಕಂಪನಿಯಲ್ಲಿ ಸಂಜನಾ ಸಹ ಪಾಲುದಾರೆ ಎಂಬ ಮಾಹಿತಿ ಸಿಕ್ಕಿದೆ. ಪೃಥ್ವಿ ಹಾಗೂ ಸಂಜನಾ ನಡುವೆ ಲಕ್ಷಾಂತರ ರೂಪಾಯಿ ವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ. ದಾಖಲೆಗಳನ್ನು ಕೆದಕಿದಾಗ ದೊಡ್ಡ ದೊಡ್ಡ ಹೋಟೆಲ್ಗಳಲ್ಲಿ ಪಾರ್ಟಿಗಳನ್ನು ಆಯೋಜನೆ ಮಾಡಿದ ಬಗ್ಗೆ ಪುರಾವೆಗಳು ದೊರೆತಿವೆ.
ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಮೂಲದ ಡ್ರಗ್ ಪೆಡ್ಲರ್ ಪೃಥ್ವಿ ಶೆಟ್ಟಿ ಹಾಗೂ ರಾಹುಲ್ ನೀಡಿದ್ದ ಹೇಳಿಕೆಯ ಆಧಾರದಲ್ಲಿ ನಟಿ ಸಂಜನಾ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


