ಸಿನಿಮಾ ಸುದ್ದಿ

100 ಕೋಟಿ ರೂ. ವೆಚ್ಚದ ಚಿತ್ರದಲ್ಲಿ ಉಪ್ಪಿ: 'ಮಾಸ್ಟರ್ ಪೀಸ್' ನಿರ್ದೇಶಕ ಮಂಜು ಮಾಂಡವ್ಯ ನಿರ್ದೇಶನ

ಸೂಪರ್ ಸ್ಟಾರ್ ಉಪೇಂದ್ರ ನಾಯಕರಾಗಿ ನಟಿಸಲಿರುವ ನೂತನ ಚಿತ್ರ 2021ರ ಜನವರಿಯಲ್ಲಿ ಆರಂಭವಾಗಲಿದೆ.

100 ಕೋಟಿ ರೂ. ವೆಚ್ಚದ ಚಿತ್ರದಲ್ಲಿ ಉಪ್ಪಿ: 'ಮಾಸ್ಟರ್ ಪೀಸ್' ನಿರ್ದೇಶಕ ಮಂಜು ಮಾಂಡವ್ಯ ನಿರ್ದೇಶನ
ಉಪ್ರೇಂದ್ರ-ಮಂಜು ಮಾಂಡವ್ಯ
Published On :

ಬೆಂಗಳೂರು: ಸೂಪರ್ ಸ್ಟಾರ್ ಉಪೇಂದ್ರ ನಾಯಕರಾಗಿ ನಟಿಸಲಿರುವ ನೂತನ ಚಿತ್ರ 2021ರ ಜನವರಿಯಲ್ಲಿ ಆರಂಭವಾಗಲಿದೆ. 

100 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಇದಾಗಲಿದ್ದು, ಮಾಸ್ಟರ್ ಪೀಸ್ ಖ್ಯಾತಿಯ ಮಂಜು ಮಾಂಡವ್ಯ ಈ ಅದ್ದೂರಿ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಉಪೇಂದ್ರ-ಮಂಜು ಮಾಂಡವ್ಯ ಕಾಂಬಿನೇಶನಲ್ಲಿ ಮೂಡಿಬರಲಿರುವ ಈ ಚಿತ್ರದ ಬಗ್ಗೆ ಅಪಾರ ನಿರೀಕ್ಷೆಯಿದೆ. ಇನ್ನು ಪ್ಯಾನ್ ಇಂಡಿಯಾ ಸಿನಿಮಾವನ್ನು ನಿಮಿಷಾಂಬ ಪ್ರೊಡಕ್ಷನ್ಸ್ ಲಾಂಛನದಲ್ಲಿ ಅಣ್ಣಯ್ಯ ಚಂದ್ರು ನಿರ್ಮಿಸುತ್ತಿದ್ದಾರೆ.

Story image

ಕಥೆ, ಚಿತ್ರಕಥೆ ಸಂಭಾಷಣೆಯನ್ನು ನಿರ್ದೇಶಕ ಮಂಜು ಮಾಂಡವ್ಯ ಅವರೇ ಬರೆದಿದ್ದಾರೆ. ಚಿತ್ರದ ಕಥೆ ಕೇಳಿ ಇಷ್ಟಪಟ್ಟಿರುವ ಉಪೇಂದ್ರ ಅವರು ಚಿತ್ರದಲ್ಲಿ ಅಭಿನಯಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.