ತೆಲುಗು ಹಾಸ್ಯನಟ ಕೊಸೂರಿ ವೇಣುಗೋಪಾಲ್ ಕೊರೋನಾಗೆ ಬಲಿ
ತೆಲುಗು ಚಿತ್ರರಂಗದ ಖ್ಯಾತ ಹಾಸ್ಯನಟ ಕೊಸುರಿ ವೇಣುಗೋಪಾಲ್ ನಿಧನ ಹೊಂದಿದ್ದಾರೆ. ಕೋವಿಡ್-19 ನಿಂದ ಬಳಲುತ್ತಿದ್ದ ವೇಣುಗೋಪಾಲ್ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಹೈದರಾಬಾದ್ : ತೆಲುಗು ಚಿತ್ರರಂಗದ ಖ್ಯಾತ ಹಾಸ್ಯನಟ ಕೊಸುರಿ ವೇಣುಗೋಪಾಲ್ ನಿಧನ ಹೊಂದಿದ್ದಾರೆ. ಕೋವಿಡ್-19 ನಿಂದ ಬಳಲುತ್ತಿದ್ದ ವೇಣುಗೋಪಾಲ್ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಳೆದ ಕೆಲವು ದಿನಗಳಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಣುಗೋಪಾಲ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.
ವೇಣುಗೋಪಾಲ್ ಪಶ್ಚಿಮ ಗೋದಾವರಿಯ ನರಸಾಪುರದವರು. ಚಿತ್ರರಂಗಕ್ಕೆ ಕಾಲಿಡುವ ಮೊದಲು ಭಾರತದ ಆಹಾರ ನಿಗಮದಲ್ಲಿ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದರು. ಕೆಲಸದ ಜೊತೆಗೆ ಸಿನಿಮಾಗಳಲ್ಲಿಯೂ ಅಭಿನಯಿಸುತ್ತಿದ್ದರು.
ಮರ್ಯಾದ ರಾಮಣ್ಣ', 'ಚಲೋ', 'ಪಿಲ್ಲಾ ಜಮೀನ್ದಾದ್', ಸೇರಿದಂತೆ ಸಾಕಷ್ಟು ಜನಪ್ರಿಯ ಸಿನಿಮಾಗಳಲ್ಲಿ ನಟಿಸಿದ್ದಾರೆ. 'ಮರ್ಯಾದ ರಾಮಣ್ಣ' ಸಿನಿಮಾ ವೇಣುಗೋಪಾಲ್ ಅವರಿಗೆ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟ ಸಿನಿಮಾವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


