ದರಿದ್ರ ದೇಶ ಚೀನಾ ಮಟ್ಟಹಾಕಿ, ಮೂಲೆಗುಂಪು ಮಾಡಬೇಕು: ಎಸ್ ಪಿಬಿ ನಿಧನಕ್ಕೆ ಜಗ್ಗೇಶ್ ಕಂಬನಿ
ತಮ್ಮ ಸಿರಿಕಂಠದ ಮೂಲಕ ನಮ್ಮನ್ನು ರಂಜಿಸಿದ್ದ ಗಾನಚೇತನ ತಮ್ಮ ಗಾಯನವನ್ನು ನಿಲ್ಲಿಸಿದ್ದಾರೆ. ಹಲವಾರು ನಟರು ಮತ್ತು ಚಿತ್ರರಂಗದವರು ಅವರಿಗೆ ಸಂತಾಪ ಸೂಚಿಸಿದ್ದಾರೆ.

ಬೆಂಗಳೂರು: ತಮ್ಮ ಸಿರಿಕಂಠದ ಮೂಲಕ ನಮ್ಮನ್ನು ರಂಜಿಸಿದ್ದ ಗಾನಚೇತನ ತಮ್ಮ ಗಾಯನವನ್ನು ನಿಲ್ಲಿಸಿದ್ದಾರೆ. ಹಲವಾರು ನಟರು ಮತ್ತು ಚಿತ್ರರಂಗದವರು ಅವರಿಗೆ ಸಂತಾಪ ಸೂಚಿಸಿದ್ದಾರೆ.
ಎಸ್ ಪಿ ಬಿ ನಿಧನದ ಹಿನ್ನೆಲೆಯಲ್ಲಿ ನಟ ಜಗ್ಗೇಶ್ ಟ್ವೀಟ್ ಮಾಡಿದ್ದು, ಯಾರ ಕಣ್ಣು ತಾಕಿತು. ಯಾವ ತಪ್ಪಿಗೆ ಈ ಶಿಕ್ಷೆ. ಇನ್ನು ಎಷ್ಟು ಸಾಧಕರು ಈ ಸಾವಿನ ಶಿಕ್ಷೆಗೆ ಸಾಲು ನಿಂತಿಹರು. ವಿಶ್ವಶಾಂತಿ ಭಂಗಕ್ಕೆ ಕೊರೋನಾ ಹರಡಿ ಮಳ್ಳಿಯಂತ ದರಿದ್ರ ದೇಶ. ಚೀನವನ್ನು ವಿಶ್ವದ ಕಾಳಜಿ ಇರುವ ಇತರ ರಾಷ್ಟ್ರಗಳು ಮಟ್ಟಹಾಕಿ ಮೂಲೆಗುಂಪು ಮಾಡಬೇಕು. ನನ್ನ ನೆಚ್ಚಿನ ಹೃದಯವನ್ನು ಈ ರೀತಿ ಕಳೆದುಕೊಳ್ಳುವೆ ಎನಿಸಲಿಲ್ಲ ಓಂಶಾಂತಿ. ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.
ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿರುವ ಜಗ್ಗೇಶ್ ರವರು ಗೌರವಾನ್ವಿತ ವಿದಾಯ.. ನಿಮ್ಮಧ್ವನಿ ತಮ್ಮದಾಗಿಸಿ ನಟಿಸಿ ಚಪ್ಪಾಳೆ ಪಡೆದ ಅದೃಷ್ಟವಂತ ನಟರ ಸಾಲಲ್ಲಿ ನಾನು ಒಬ್ಬ.. ನೀವು ಕಾಯಕದಲ್ಲಿ ಗಾಯಕ ಆದರೆ ನಿಮ್ಮಲ್ಲಿ ಒಬ್ಬ ಮಾತೃಹೃದಯದ ಭಾವನಾಜೀವಿ ಇದ್ದ. ಮದ್ರಾಸ್ ನಲ್ಲಿ ನಿಮ್ಮಜೊತೆ ಕಳೆದ ಆ ದಿನಗಳು ಮತ್ತೆ ಬರದು. ಮರೆಯಲಾಗದು. ಹೋದಿರಿ ಮತ್ತೆ ಬೇಗ ಬನ್ನಿ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


