ಸಿಸಿಬಿ ಅಧಿಕಾರಿಗಳು ಮತ್ತೆ ವಿಚಾರಣೆಗೆ ಕರೆದಿಲ್ಲ: ಆ್ಯಂಕರ್ ಅನುಶ್ರೀ
ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಸಿಸಿಬಿ ಅಧಿಕಾರಿಗಳು ಶನಿವಾರ ಖ್ಯಾತ ಆ್ಯಂಕರ್ ಹಾಗೂ ನಟಿ ಅನುಶ್ರೀ ಅವರ ವಿಚಾರಣೆ ನಡೆಸಿ ಅಗತ್ಯ ಮಾಹಿತಿ ಪಡೆದಿದ್ದಾರೆ.

ಮಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಸಿಸಿಬಿ ಅಧಿಕಾರಿಗಳು ಶನಿವಾರ ಖ್ಯಾತ ಆ್ಯಂಕರ್ ಹಾಗೂ ನಟಿ ಅನುಶ್ರೀ ಅವರ ವಿಚಾರಣೆ ನಡೆಸಿ ಅಗತ್ಯ ಮಾಹಿತಿ ಪಡೆದಿದ್ದಾರೆ.
ಡಿಸಿಪಿ ವಿನಯ್ ಗಾಂವ್ಕರ್ ನೇತೃತ್ವದ ಸಿಸಿಬಿ ತಂಡ ಅನುಶ್ರೀಯನ್ನು ಸತತ ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿದೆ. ವಿಚಾರಣೆ ನಂತರ ಸಿಸಿಬಿ ಕಚೇರಿಯಿಂದ ಹೊರಬಂದ ಬಳಿಕ ಸುದ್ದಿಗಾರರೊಡನೆ ಮಾತನಾಡಿದ ಅನುಶ್ರೀ, “ಬಂಧಿತ ಆರೋಪಿಗಳಾದ ಕಿಶೋರ್ ಶೆಟ್ಟಿ ಹಾಗೂ ತರುಣ್ ರಾಜ್ ಪರಿಚಯವಿದ್ದ ಹಿನ್ನೆಲೆಯಲ್ಲಿ ನನ್ನನ್ನು ವಿಚಾರಣೆಗೆ ಗುರಿಪಡಿಸಿದ್ದರು” ಎಂದು ಹೇಳಿದ್ದಾರೆ.
ಪೊಲೀಸರು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದು, ಮತ್ತೆ ವಿಚಾರಣೆಗೆ ಕರೆದಿಲ್ಲ. ಆದರೆ ಮತ್ತೆ ಕರೆದರೆ ಹಾಜರಾಗುತ್ತೇನೆ. ಡ್ರಗ್ ಮಾಫಿಯಾ ರಾಜ್ಯಕ್ಕೆ ಅಂಟಿರುವ ಭೂತ. ಆ ಭೂತವನ್ನು ಹೋಗಲಾಡಿಸಲು ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ನಾವು ಸಹಕಾರ ನೀಡಬೇಕು ಎಂದರು.
ಡ್ರಗ್ಸ್ ಪಾರ್ಟಿ ವಿಚಾರವಾಗಿ ಉತ್ತರಿಸಿದ ಅವರು, ಪಾರ್ಟಿಯಲ್ಲಿ ಭಾಗಿಯಾಗಿರುವ ವಿಚಾರಕ್ಕೆ ಸಂಬಂಧಿಸಿ ನನ್ನನ್ನು ವಿಚಾರಣೆಗೆ ಕರೆದಿಲ್ಲ. ಅವರು ನನ್ನ ಡ್ಯಾನ್ಸ್ ಕೊರಿಯೋಗ್ರಾಫರ್ ಆದ ಕಾರಣ ವಿಚಾರಣೆಗೆ ಕರೆದಿದ್ದರು. ಕಿಶೋರ್ ಅಮನ್ ಶೆಟ್ಟಿ ಹಾಗೂ ತರುಣ್ ಇವರಿಬ್ಬರು ಕೂಡಾ 12 ವರ್ಷಗಳ ಹಿಂದೆ ಒಂದು ಕಾರ್ಯಕ್ರಮದಲ್ಲಿ ನನ್ನ ಡ್ಯಾನ್ಸ್ ಕೊರಿಯೋಗ್ರಾಫರ್ ಆಗಿದ್ದರು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


