ಸಿನಿಮಾ ಸುದ್ದಿ

ಮುಂಬಯಿ: ಕಿರುತೆರೆ ನಟಿ ದಿವ್ಯಾ ಭಟ್ನಾಗರ್ ಕೊರೋನಾಗೆ ಬಲಿ

ಕಿರುತೆರೆ ನಟಿ ದಿವ್ಯಾ ಭಟ್ನಾಕರ್‌ ಅವರು ಕೋವಿಡ್–19 ಹಾಗೂ ನ್ಯುಮೋನಿಯಾದಿಂದಾಗಿ ಮೃತಪಟ್ಟಿದ್ದಾರೆ. ಕಳೆದವಾರ ಸೋಂಕು ದೃಢಪಟ್ಟ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ವೆಂಟಿಲೇಟರ್‌ ಅಳವಡಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.

ಮುಂಬಯಿ: ಕಿರುತೆರೆ ನಟಿ ದಿವ್ಯಾ ಭಟ್ನಾಗರ್ ಕೊರೋನಾಗೆ ಬಲಿ
ದಿವ್ಯಾ ಭಟ್ನಾಗರ್
Published On :

ಮುಂಬೈ: ಕಿರುತೆರೆ ನಟಿ ದಿವ್ಯಾ ಭಟ್ನಾಕರ್‌ ಅವರು ಕೋವಿಡ್–19 ಹಾಗೂ ನ್ಯುಮೋನಿಯಾದಿಂದಾಗಿ ಮೃತಪಟ್ಟಿದ್ದಾರೆ. ಕಳೆದವಾರ ಸೋಂಕು ದೃಢಪಟ್ಟ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ವೆಂಟಿಲೇಟರ್‌ ಅಳವಡಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.

ಕಳೆದ ಒಂದು ವಾರದಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಸೆವೆನ್‌ ಹಿಲ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. 34 ವರ್ಷದ ದಿವ್ಯ ನಿನ್ನೆ ರಾತ್ರಿ 3ಗಂಟೆಯಲ್ಲಿ ನಿಧನರಾಗಿದ್ದಾರೆ. ಆಕೆ ಮೃತಪಟ್ಟಿರುವುದನ್ನು ವೈದ್ಯರು ಖಚಿತಪಡಿಸಿದ್ದಾರೆ. ನನಗೆ ಮತ್ತು ಆಕೆಯ ಕುಟುಂಬಕ್ಕೆ ಇದು ದೊಡ್ಡ ಆಘಾತ. ಆಕೆಯ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಅವರ ಸ್ನೇಹಿತರು ತಿಳಿಸಿದ್ದಾರೆ.

ನವೆಂಬರ್ 26 ರಂದು ಅನಾರೋಗ್ಯಕ್ಕೀಡಾಗಿದ್ದ ದಿವ್ಯಾ ಆಸ್ಪತ್ರೆಗೆ ದಾಖಲಾಗಿದ್ದರು, ಆಕೆಯ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ  ನಾನು ಮತ್ತು ನನ್ನ ಪುತ್ರ ಮುಂಬಯಿಗೆ ಆಗಮಿಸಿದೆವು. ಆಕೆಯ ಆರೋಗ್ಯ ತೀವ್ರ ಹದಗೆಟ್ಟಿದ್ದು, ವೆಂಟಿಲೇಟರ್ ನಲ್ಲಿ ಇಟ್ಟಿದ್ದರು ಎಂದು ದಿವ್ಯಾ ತಾಯಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.