'ಹಣಕ್ಕಾಗಿ ಸಾಯಬೇಡಿ, ನೊಂದವರ ಪೀಡಿಸಬೇಡಿ, ತಿನ್ನಲು ಅನ್ನಸಿಗದೆ ಸಾಯುತ್ತೀರಿ'
ಕೋವಿಡ್‌ನಿಂದ ಮೃತಪಟ್ಟವರ ಕುಟುಂಬದವರಿಂದ ಆಸ್ಪತ್ರೆಯಲ್ಲಿ, ಆಂಬುಲೆನ್ಸ್, ಚಿತಾಗಾರದವರು ಹಣ ವಸೂಲಿ ಮಾಡುತ್ತಿರುವ ಹಲವು ಘಟನೆಗಳು ವರದಿಯಾಗುತ್ತಿರುವ ಬೆನ್ನಲ್ಲೇ ಈ ಕುರಿತು ನಟ ಜಗ್ಗೇಶ್ ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟವರ ಕುಟುಂಬದವರಿಂದ ಆಸ್ಪತ್ರೆಯಲ್ಲಿ, ಆಂಬುಲೆನ್ಸ್, ಚಿತಾಗಾರದವರು ಹಣ ವಸೂಲಿ ಮಾಡುತ್ತಿರುವ ಹಲವು ಘಟನೆಗಳು ವರದಿಯಾಗುತ್ತಿರುವ ಬೆನ್ನಲ್ಲೇ ಈ ಕುರಿತು ನಟ ಜಗ್ಗೇಶ್ ಆಕ್ರೋಶ ಹೊರಹಾಕಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ನಟ ಜಗ್ಗೇಶ್, ಕೋವಿಡ್ ಸಂತ್ರಸ್ತರು ನೊಂದುTvಲಿ ಮಾತಾಡಿದ್ದು ನೋಡಿ ಸಂಕಟವಾಯ್ತು! ಆಸ್ಪತ್ರೆ,ಆಂಬುಲೆನ್ಸ್,ಔಷಧಿ ಅಂಗಡಿ,ಸ್ಮಶಾನ ಕಾರ್ಯಕರ್ತರು ಹಣಕ್ಕಾಗಿ ಸಾಯಬೇಡಿ, ನೊಂದವರ ಪೀಡಿಸಬೇಡಿ,ತಿನ್ನಲು ಅನ್ನಸಿಗದೆ ಸಾಯುತ್ತೀರಿ!ನೊಂದವರಿಗೆ ಭುಜ ಕೊಟ್ಟು ಸಹಾಯಮಾಡಿ!ಸತ್ತರೆ ಹಣಬರೋಲ್ಲಾ ಪಾಪಪುಣ್ಯ ಮಾತ್ರ ನಮ್ಮಹಿಂದೆ ಬರೋದು! ದೇವನೊಬ್ಬನಿರುವ ಎಲ್ಲ ನೋಡುತಿರುವ ಎಂದು ಹೇಳಿದ್ದಾರೆ.
‘ಇಂಥ ಸಮಯದಲ್ಲೇ ಈ ಕ್ರೂರಿಗಳು ಸಕ್ರಿಯರಾಗುವುದು. ಇಂಥ ಕೀಳು ಜನರಿಂದ ಮನುಷ್ಯರಿಗೆ ಮನುಷ್ಯರ ಮೇಲೆ ನಂಬಿಕೆ ಸತ್ತು ಹೋಗಿದೆ, ನಾನು ಇಷ್ಟು ನೊಂದದ್ದು ಇತ್ತೀಚಿನ ಈ ಕ್ರೂರ ವರ್ತನೆಯಿಂದ. ನನಗೆ ಅರಿಯದಂತೆ ಕೆಟ್ಟಬೈಗುಳ, ಕೋಪ ಅನಾವಶ್ಯಕವಾಗಿ ಬರುತ್ತಿದೆ. ತಪ್ಪು ಎಂದು ನನ್ನ ನಾನೆ ಸರಿಪಡಿಸಿಕೊಳ್ಳುತ್ತಿರುವೆ. ಇಂಥ ದಿನಗಳನ್ನು
ಎಣಿಸಲಿಲ್ಲಾ ನಾನು, ಆಘಾತವಾಗಿದೆ’ ಎಂದಿದ್ದಾರೆ.
‘ನಾನು ಕಾಯವಾಚಮನ ದೇವರು ಮೆಚ್ಚುವಂತೆ ಐದು ಜನ ಕೋವಿಡ್ ಬಂದವರಿಗೆ ತನುಮನಧನ ಅರ್ಪಿಸಿ ಸೇವೆಮಾಡುತ್ತಿರುವೆ. ಅದರಲ್ಲಿ ಒಬ್ಬ ಬಂಧು ತೀರಿಹೋದ. ದಯಮಾಡಿ ನೀವು ನಿಮ್ಮವರಿಗೆ ಸಹಾಯ ಮಾಡಿ. ಆಗದಿದ್ದರೆ ಮೌನವಾಗಿ ಇದ್ದುಬಿಡಿ. ಟ್ವಿಟರ್‌ನಲ್ಲಿ ಸಂಬಂಧವಿಲ್ಲದ ಪ್ರಶ್ನೆ, ತೀಟೆ, ಅಣಕಕ್ಕೆ ಈ ಕೆಟ್ಟ ಪರಿಸ್ಥಿತಿ ಬಳಕೆ ಮಾಡಬೇಡಿ. ಈ ಗುಣ ಯಾರಿಗು ಶೋಭೆಯಲ್ಲಾ’ ಎಂದೂ ಜಗ್ಗೇಶ್ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


