ಕನ್ನಡದ 'ಕೋಟಿ' ನಿರ್ಮಾಪಕ ರಾಮು ಕೊರೋನಾಗೆ ಬಲಿ!
ಗೋಲಿಬಾರ್, ಎಕೆ 47, ಸಿಂಹದ ಮರಿಯಂತ ಬ್ಲಾಕ್ ಬಸ್ಟರ್ ಚಿತ್ರಗಳನ್ನು ನಿರ್ಮಿಸಿ ಕನ್ನಡದ ಕೋಟಿ ನಿರ್ಮಾಪಕ ಎಂದೇ ಖ್ಯಾತರಾಗಿದ್ದ ರಾಮು ಕೊರೋನಾಗೆ ಬಲಿಯಾಗಿದ್ದಾರೆ.

ಬೆಂಗಳೂರು: ಗೋಲಿಬಾರ್, ಎಕೆ 47, ಸಿಂಹದ ಮರಿಯಂತ ಬ್ಲಾಕ್ ಬಸ್ಟರ್ ಚಿತ್ರಗಳನ್ನು ನಿರ್ಮಿಸಿ ಕನ್ನಡದ ಕೋಟಿ ನಿರ್ಮಾಪಕ ಎಂದೇ ಖ್ಯಾತರಾಗಿದ್ದ ರಾಮು ಕೊರೋನಾಗೆ ಬಲಿಯಾಗಿದ್ದಾರೆ.
ನಟಿ ಮಾಲಾಶ್ರೀ ಅವರ ಪತಿ ರಾಮು ಅವರ ಆರೋಗ್ಯದಲ್ಲಿ ಏರು ಪೇರು ಉಂಟಾದ ಹಿನ್ನೆಲೆಯಲ್ಲಿ ಮೂರು ದಿನಗಳ ಹಿಂದೆ ನಗರದ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

52 ವರ್ಷದ ರಾಮು ಅವರಿಗೆ ಒಂದು ವಾರದ ಹಿಂದೆ ಕೊರೋನಾ ಪಾಸಿಟಿವ್ ಬಂದಿತ್ತು. ರಾಮು ಅವರು ಪತ್ನಿ, ಮಗ ಮತ್ತು ಮಗಳನ್ನು ಅಗಲಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ 39 ಚಿತ್ರಗಳನ್ನು ನಿರ್ಮಿಸಿದ್ದಾರೆ. ಗೋಲಿಬಾರ್ ಚಿತ್ರದ ನಿರ್ಮಾಣದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದರು. ಇನ್ನು ಮೊದಲಿಗೆ ಕನ್ನಡದಲ್ಲಿ ಕೋಟಿ ಬಜೆಟ್ ನಲ್ಲಿ ಚಿತ್ರ ನಿರ್ಮಿಸಿದ್ದರಿಂದ ಅವರಿಗೆ ಕೋಟಿ ರಾಮು ಎಂದು ಹೆಸರು ಬಂದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


