'ದುಬಾರಿ'ಗು ಮೊದಲು ಮತ್ತೊಂದು ಕಥೆ ಹುಡುಕಾಟದಲ್ಲಿ ಧ್ರುವ ಸರ್ಜಾ!
ಧ್ರುವ ಸರ್ಜಾ ‘ದುಬಾರಿ’ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನಲಾಗಿತ್ತು. ಆದರೆ, ಈ ಸಿನಿಮಾ ಸೆಟ್ಟೇರುವುದು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೊಂದು ಚಿತ್ರದತ್ತ ಧ್ರುವ ಸರ್ಜಾ ಮುಖ ಮಾಡಿದ್ದಾರೆಂದು ಹೇಳಲಾಗುತ್ತಿದೆ.

ಕಳೆದ ಫೆಬ್ರವರಿ ತಿಂಗಳಲ್ಲಿ ತೆರೆಕಂಡ ಆ್ಯಕ್ಷನ್ ಕಿಂಗ್ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭಾರೀ ಕಲೆಕ್ಷನ್ ಮಾಡಿತ್ತು. ಬಳಿಕ ಧ್ರುವ ಸರ್ಜಾ ‘ದುಬಾರಿ’ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನಲಾಗಿತ್ತು. ಆದರೆ, ಈ ಸಿನಿಮಾ ಸೆಟ್ಟೇರುವುದು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೊಂದು ಚಿತ್ರದತ್ತ ಧ್ರುವ ಸರ್ಜಾ ಮುಖ ಮಾಡಿದ್ದಾರೆಂದು ಹೇಳಲಾಗುತ್ತಿದೆ.
ದುಬಾರಿ ಚಿತ್ರದ ಸಂಪೂರ್ಣ ಚಿತ್ರೀಕರಣವನ್ನು ವಿದೇಶಗಳಲ್ಲಿ ಮಾಡಲು ಚಿತ್ರತಂಡ ನಿರ್ಧರಿಸಿತ್ತು. ಆದರೆ, ಕೊರೋನಾ ಸಾಂಕ್ರಾಮಿಕ ರೋಗ ಭಾರೀ ಪ್ರಮಾಣದಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ಚಿತ್ರದ ಕಾರ್ಯಗಳನ್ನು ಬದಿಗೊತ್ತಿ ಮುಂದಿನ ಚಿತ್ರಗಳತ್ತ ಗಮನ ಹರಿಸಲು ಧ್ರುವ ಸರ್ಜಾರ ನಿರ್ಧರಿಸಿದ್ದಾರೆಂದು ಮೂಲಗಳು ತಿಳಿಸಿವೆ.
ಚಿತ್ರದ ಚಿತ್ರೀಕರಣ ಬಿಟ್ಟು ತಂತ್ರಜ್ಞರು ಹಾಗೂ ಪಾತ್ರಗಳಿಗೆ ಕಲಾವಿದರಿಗಾಗಿ ಚಿತ್ರತಂಡ ಹುಡುಕಾಟ ನಡೆಸಿದ್ದು, ಚಿತ್ರ ಕುರಿತು ಚಿತ್ರತಂಡ ಅಧಿಕೃತ ಘೋಷಣೆಗಳನ್ನು ಇನ್ನು ಕೆಲವೇ ದಿನಗಳಲ್ಲಿ ಮಾಡಲಿದೆ ಎನ್ನಲಾಗುತ್ತಿದೆ.
ದುಬಾರಿ ಬಳಿಕ ಧ್ರುವ ಸರ್ಜಾ ಅವರು ರಾಘವೇಂದ್ರ ಹೆಗಡೆ ನಿರ್ದೇಶನದ ಜಗ್ಗು ದಾದಾ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದಲ್ಲದೆ ನಿರ್ದೇಶಕ ಎ ಹರ್ಷ ಹಾಗೂ ಎಪಿ ಅರ್ಜುನ್ ಅವರೊಂದಿಗೂ ಚಿತ್ರವೊಂದರ ಕುರಿತು ಮಾತುಕತೆ ನಡೆಸುತ್ತಿದ್ದಾರೆಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


