ಸಿನಿಮಾ ಸುದ್ದಿ

ಕೊರೋನಾ ಕರ್ಫ್ಯೂ ನಡುವೆ ಸೋಂಕಿತರಿಗಾಗಿ ಆ್ಯಂಬುಲೆನ್ಸ್ ಚಾಲಕನಾದ ನಟ ಅರ್ಜುನ್ ಗೌಡ

ಅರ್ಜುನ್ ಗೌಡ ಅವರು ಕೊರೋನಾ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸಲು ಹಾಗೂ ಕೊರೋನಾಗೆ ಬಲಿಯಾದವರ ಮೃತದೇಹಗಳನ್ನು ಸಾಗಿಸಲು ಆ್ಯಂಬುಲೆನ್ಸ್ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಕೊರೋನಾ ಕರ್ಫ್ಯೂ ನಡುವೆ ಸೋಂಕಿತರಿಗಾಗಿ ಆ್ಯಂಬುಲೆನ್ಸ್ ಚಾಲಕನಾದ ನಟ ಅರ್ಜುನ್ ಗೌಡ
ಅರ್ಜುನ್ ಗೌಡ
Published On :

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಚಿತ್ರದಲ್ಲಿ ಅಭಿನಯಿಸಿದ್ದ ನಟ ಅರ್ಜುನ್ ಗೌಡ ಇದೀಗ ಕೊರೋನಾ ಕರ್ಫ್ಯೂ ಸಮಯದಲ್ಲಿ ಸೋಂಕಿತರಿಗಾಗಿ ಆ್ಯಂಬುಲೆನ್ಸ್ ಚಾಲಕನಾಗುವ ಮೂಲಕ ತಮ್ಮದೇ ಆದ ರೀತಿಯಲ್ಲಿ ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡುತ್ತಿದ್ದಾರೆ. 

ಕೊರೋನಾ ಸಂಕಷ್ಟದ ಸಮಯದಲ್ಲಿ ಸೋಂಕಿತರಿಗೆ ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ಮತ್ತು ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಪರಾಡುತ್ತಿದ್ದಾರೆ. ಹೀಗಾಗಿ ಅರ್ಜುನ್ ಗೌಡ ಅವರು ಸಹಾಯ ಕೋರಿದವರ ಪಾಲಿಗೆ ನೆರವಾಗಲು ಮುಂದಾಗಿದ್ದಾರೆ. 

Story image

ಅರ್ಜುನ್ ಗೌಡ ಅವರು ಕೊರೋನಾ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸಲು ಹಾಗೂ ಕೊರೋನಾಗೆ ಬಲಿಯಾದವರ ಮೃತದೇಹಗಳನ್ನು ಸಾಗಿಸಲು ಆ್ಯಂಬುಲೆನ್ಸ್ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನು ಅರ್ಜುನ್ ಸೇವಾ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. 

ಈ ಬಗ್ಗೆ ಪ್ರತಿಕ್ರಿಯಿಸಿದ ಅರ್ಜುನ್ ಅವರು, ಅದಾಗಲೇ ಕೊರೋನಾದಿಂದ ಮೃತಪಟ್ಟ ಹಲವಾರು ಮಂದಿಯ ಅಂತ್ಯಕ್ರಿಯೆ ಮಾಡುವ ಮೂಲಕ ಸಹಾಯ ಮಾಡಿದ್ದೇನೆ. ನನ್ನ ಕೈಲಾದಷ್ಟು ಸಹಾಯ ಮಾಡುತ್ತಿದ್ದೇನೆ. ಇನ್ನು ಎರಡು ತಿಂಗಳ ಕಾಲ ನನ್ನ ಈ ಕಾರ್ಯ ಮುಂದುವರೆಯಲಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.