ಜೋಗಿ ಪ್ರೇಮ್ -ಧ್ರುವ ಸರ್ಜಾ ಕಾಂಬಿನೇಷನ್ ನಲ್ಲಿ ಹೊಸ ಸಿನಿಮಾ: ಚರ್ಚೆಯ ಹಂತದಲ್ಲಿ ಪ್ರಾಜೆಕ್ಟ್!
ಎಪಿ ಅರ್ಜುನ್ ನಿರ್ದೇಶನದ ಸಿನಿಮಾದಲ್ಲಿ ಧ್ರುವ ಸರ್ಜಾ ನಟನೆಯ ಚಿತ್ರ ಶೂಟಿಂಗ್ ಆರಂಭಕ್ಕೆ ಸಿದ್ಧತೆ ನಡೆಯುತ್ತಿದೆ. ಇದೇ ವೇಳೆ ಜೋಗಿ ಪ್ರೇಮ್ ನಿರ್ದೇಶನದ ಕಮರ್ಷಿಯಲ್ ಎಂಟರ್ಟೈನ್ ಮೆಂಟ್ ಸಿನಿಮಾಗಾಗಿ ಮಾತುಕತೆ ನಡೆಯುತ್ತಿದೆ.

ಎಪಿ ಅರ್ಜುನ್ ನಿರ್ದೇಶನದ ಸಿನಿಮಾದಲ್ಲಿ ಧ್ರುವ ಸರ್ಜಾ ನಟನೆಯ ಚಿತ್ರ ಶೂಟಿಂಗ್ ಆರಂಭಕ್ಕೆ ಸಿದ್ಧತೆ ನಡೆಯುತ್ತಿದೆ. ಇದೇ ವೇಳೆ ಜೋಗಿ ಪ್ರೇಮ್ ನಿರ್ದೇಶನದ ಕಮರ್ಷಿಯಲ್ ಎಂಟರ್ಟೈನ್ ಮೆಂಟ್ ಸಿನಿಮಾಗಾಗಿ ಮಾತುಕತೆ ನಡೆಯುತ್ತಿದೆ.
ಮಾಸ್ ಕಮರ್ಷಿಯಲ್ ಎಂಟರ್ಟೈನ್ ಮೆಂಟ್ ಸಿನಿಮಾಗಾಗಿ ಪ್ರೇಮ್ ಮತ್ತು ಧ್ರುವ ಪ್ಲಾನ್ ಮಾಡುತ್ತಿದ್ದು ಚರ್ಚೆ ನಡೆಯುತ್ತಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಜನಪ್ರಿಯವಾಗಿರುವ ಪ್ರೊಡಕ್ಷನ್ ಹೌಸ್ ಒಂದು ಈ ಇಬ್ಬರ ಸಿನಿಮಾ ನಿರ್ಮಾಣ ಮಾಡಲಿದೆ.
ಇದರ ಹೊರತಾಗಿ ಧ್ರುವ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅರ್ಜುನ್ ನಿರ್ದೇಶನದ ಸಿನಿಮಾದ ಮೂಹೂರ್ತ ಆಗಸ್ಟ್ 15 ರಂದು ನೆರವೇರಲಿದೆ. ಜಗ್ಗುದಾದಾ ನಿರ್ದೇಶಕ ರಾಘವೇಂದ್ರ ಹೆಗ್ಡೆ ನಿರ್ದೇಶನದ ಮತ್ತೊಂದು ಸಿನಿಮಾಗೂ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಎ ಹರ್ಷ ಜೊತೆಗೂ ಸಿನಿಮಾ ತಯಾರಿ ನಡೆಯುತ್ತಿದೆ.
ಜೋಗಿ ಪ್ರೇಮ್ ತಮ್ಮ ಬಾಮೈದುನ ರಾಣಾ ನಟನೆಯ ಏಕ್ ಲವ್ ಯಾ ಸಿನಿಮಾ ನಿರ್ದೇಶನ ಮಾಡುತ್ತಿದ್ದು ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಲಾಕ್ ಡೌನ್ ನಂತರ ಶೂಟಿಂಗ್ ಪುನಾರಂಭವಾಗಿದೆ.
ರೋಮ್ಯಾಂಟಿಕ್ ಸಿನಿಮಾದಲ್ಲಿ ರಚಿತಾ ರಾಮ್ ಮತ್ತು ರೇಷ್ಮಾ ನಾಣಯ್ಯ ಅಭಿನಯಿಸಿದ್ದಾರೆ. ಶೀಘ್ರದಲ್ಲೇ ಆಡಿಯೋ ಬಿಡುಗಡೆಯಾಗಲಿದೆ. ಪ್ರೇಮ್ ಸುದೀಪ್ ಜೊತೆ ಮತ್ತೊಂದು ಸಿನಿಮಾ ಮಾಡುವ ತಯಾರಿಯಲ್ಲಿದ್ದಾರೆ. ಆದರೆ ಸಿನಿಮಾ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರಬಂದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


