ಸೈಕಾಲಜಿಕಲ್ ಥ್ರಿಲ್ಲರ್ ಚಿತ್ರದಲ್ಲಿ ಪೃಥ್ವಿ ಅಂಬರ್- ಮಾನ್ವಿತಾ ಜೋಡಿ
ಸಬೂ ಅಲೋಶಿಯಸ್ ಹಾಗೂ ಅರುಣ್ಕುಮಾರ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಸೈಕಾಲಜಿಕಲ್ ಥ್ರಿಲ್ಲರ್ ಚಿತ್ರದಲ್ಲಿ ಇದೇ ಮೊದಲ ಬಾರಿಗೆ ನಟ ಪೃಥ್ವಿ ಅಂಬರ್ ಹಾಗೂ ನಟಿ ಮಾನ್ವಿತಾ ಕಾಮತ್ ಅವರು ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಸಬೂ ಅಲೋಶಿಯಸ್ ಹಾಗೂ ಅರುಣ್ಕುಮಾರ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಸೈಕಾಲಜಿಕಲ್ ಥ್ರಿಲ್ಲರ್ ಚಿತ್ರದಲ್ಲಿ ಇದೇ ಮೊದಲ ಬಾರಿಗೆ ನಟ ಪೃಥ್ವಿ ಅಂಬರ್ ಹಾಗೂ ನಟಿ ಮಾನ್ವಿತಾ ಕಾಮತ್ ಅವರು ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಚಿತ್ರದ ಕುರಿತು ಯಾವುದೇ ಗುಟ್ಟು ಬಿಟ್ಟುಕೊಡದ ಚಿತ್ರದ ತಂಡ ಈಗಾಗಲೇ ಸದ್ದಿಲ್ಲದೆ ಚಿತ್ರೀಕರಣವನ್ನು ಆರಂಭಿಸಿದೆ ಎಂದು ತಿಳಿದುಬಂದಿದೆ.
ಸ್ಯಾಂಡಲ್ ವುಡಲ್ ನಲ್ಲಿ ಸಬೂ ಅಲೋಶಿಯಸ್ ಹಾಗೂ ಅರುಣ್ಕುಮಾರ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಎರಡನೇ ಚಿತ್ರ ಇದಾಗಿದೆ.
ಈಗಾಗಲೇ ಈ ನಿರ್ದೇಶಕರು ಪೃಥ್ವಿ ಅಂಬರ್ ಅಂಬರ್ ಜೊತೆಗೆ ಲೈಫ್ ಈಸ್ ಬ್ಯೂಟಿಫುಲ್ ಚಿತ್ರವನ್ನು ನಿರ್ದೇಶಿಸಿದ್ದು, ಚಿತ್ರ ಬಿಡುಗಡೆಗೆ ಸಿದ್ದವಾಗಿದೆ.
ದಿಯಾ ಚಿತ್ರದ ಮೂಲಕ ಖ್ಯಾತಿ ಪಡೆದಿರುವ ಪೃಥ್ವಿ ಅಂಬರ್ ಕೈಯಲ್ಲಿ ಸಾಕಷ್ಟು ಚಿತ್ರಗಳಿವೆ. ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಅವರು ನಟಿಸುವ ದೊಡ್ಡ ಚಿತ್ರ ಬೈರಾಗಿಯಲ್ಲೂ ಪೃಥ್ವಿ ಕಾಣಿಸಿಕೊಳ್ಳುತ್ತಿದ್ದಾರೆ. ಕನ್ನಡ ಚಿತ್ರವಷ್ಟೇ ಅಲ್ಲದೆ, ಪೃಥ್ವಿ ಅಂಬರ್ ಅವರು ತಮಿಳು ಚಿತ್ರಗಳಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.
ಬೈರಾಗಿ ಚಿತ್ರವನ್ನು ವಿಜಯ್ ಮಿಲ್ಟನ್ ಅವರು ನಿರ್ದೇಶನ ಮಾಡಿದ್ದು, ಈ ಚಿತ್ರದಲ್ಲಿ ಪೃಥ್ವಿಯವರ ನಟನೆಯನ್ನು ನೋಡಿದ ವಿಜಯ್ ಮಿಲ್ಟನ್ ಅವರು ಪೃಥ್ವಿಯವರನ್ನು ತಮಿಳು ಚಿತ್ರರಂಗಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆಂದು ತಿಳಿದುಬಂದಿದೆ.
ಇನ್ನು ಮಾನ್ವಿತ ಕಾಮತ್ ಅವರು. ಪಿಸಿ.ಶೇಖರ್ ಅವರು ನಿರ್ದೇಶಿಸುತ್ತಿರುವ ರೊಮ್ಯಾಂಟಿಕ್ ಥ್ರಿಲ್ಲರ್ ಚಿತ್ರವೊಂದಕ್ಕೆ ಇತ್ತೀಚೆಗಷ್ಟೇ ಸಹಿ ಹಾಕಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


