ರಚಿತಾ ರಾಮ್- ಧನಂಜಯ್ ನಟನೆಯ 'ಮಾನ್ಸೂನ್ ರಾಗ' ಟೀಸರ್ ರಿಲೀಸ್
ಧನಂಜಯ್ ಮತ್ತು ರಚಿತಾ ರಾಮ್ ಒಟ್ಟಾಗಿ ಮೊದಲ ಬಾರಿಗೆ ನಾಯಕ ನಾಯಕಿಯಾಗಿ ಮಾನ್ಸೂನ್ ರಾಗ ಎಂಬ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.

ಧನಂಜಯ್ ಮತ್ತು ರಚಿತಾ ರಾಮ್ ಒಟ್ಟಾಗಿ ಮೊದಲ ಬಾರಿಗೆ ನಾಯಕ ನಾಯಕಿಯಾಗಿ ಮಾನ್ಸೂನ್ ರಾಗ ಎಂಬ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.
ರಮೇಶ್ ಅರವಿಂದ್ ನಟನೆಯ 'ಪುಷ್ಪಕ ವಿಮಾನ' ಚಿತ್ರ ಮಾಡಿದ್ದ ನಿರ್ದೇಶಕ ಎಸ್. ರವೀಂದ್ರನಾಥ್ ಮತ್ತು ನಿರ್ಮಾಪಕ ವಿಖ್ಯಾತ್ ಎರಡನೇ ಬಾರಿ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ.
ಈ ಚಿತ್ರ ಪಿರಿಯಾಡಿಕಲ್ ಸಿನಿಮಾ ಆಗಿದ್ದು, ಈಗಾಗಲೇ ಬಹುಪಾಲು ಚಿತ್ರೀಕರಣವನ್ನೂ ಮಾಡಿ ಮುಗಿಸಿದೆ ಚಿತ್ರತಂಡ. ಇದು ವಿಂಟೇಜ್ ಸಿನಿಮಾ. 60-70ರ ದಶಕದ ಕಥೆಯಾಗಿದೆ. ಚಿತ್ರದಲ್ಲಿ ಲವ್ ಸ್ಟೋರಿ ಇದೆ. ಅದರ ಜತೆ ಬೇರೆ ಬೇರೆ ಅಂಶಗಳೂ ಇರಲಿವೆ.
ಧನಂಜಯ್ ಮತ್ತು ರಚಿತಾ ನಟನೆಯ ದೃಶ್ಯಗಳ ಚಿತ್ರೀಕರಣ ಮಾಡಿ ಮುಗಿಸಲಾಗಿದೆ. ಚಿತ್ರದಲ್ಲಿ ಐದು ಹಾಡುಗಳಿದ್ದು, ಅನೂಪ್ ಸೀಳಿನ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಿತ್ರದಲ್ಲಿ ದಕ್ಷಿಣ ಭಾರತದ ಜನಪ್ರಿಯ ನಟರು ಕೂಡ ಮತ್ತೊಂದು ಲೀಡ್ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಅವರು ಯಾರು ಎನ್ನುವುದನ್ನು ಸದ್ಯದಲ್ಲೇ ಪ್ರಕಟಿಸುವುದಾಗಿ ಚಿತ್ರತಂಡ ಹೇಳಿದೆ.
ಸದ್ಯ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ರಚಿತಾ ರಾಮ್ ಇದರ ಜೊತೆಗೆ ಶಬರಿ ಸೆರ್ಚಿಂಗ್ ಫಾರ್ ರಾವಣ ಸೇರಿದಂತೆ ಹಲವು ಸಿನಿಮಾ ಶೂಟಿಂಗ್ ಗಳಲ್ಲಿ ಬ್ಯುಸಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


