'ಸಪ್ತ ಸಾಗರದಾಚೆಯೆಲ್ಲೋ' ಎರಡನೇ ಹಂತದ ಶೂಟಿಂಗ್ ಪ್ರಾರಂಭ!
ಹೇಮಂತ್ ಎಂ ರಾವ್ ನಿರ್ದೇಶನದ ಸಪ್ತ ಸಾಗರದಾಚೆ ಯೆಲ್ಲೋ ಸಿನಿಮಾದ ಎರಡನೇ ಹಂತದ ಶೂಟಿಂಗ ಆಗಸ್ಟ್ 16 ರಿಂದ ಆರಂಭವಾಗಿದೆ.

ಹೇಮಂತ್ ಎಂ ರಾವ್ ನಿರ್ದೇಶನದ ಸಪ್ತ ಸಾಗರದಾಚೆ ಯೆಲ್ಲೋ ಸಿನಿಮಾದ ಎರಡನೇ ಹಂತದ ಶೂಟಿಂಗ ಆಗಸ್ಟ್ 16 ರಿಂದ ಆರಂಭವಾಗಿದೆ.
ರಕ್ಷಿತ್ ಶೆಟ್ಟಿ ಮತ್ತು ರುಕ್ಷ್ಮಿಣಿ ವಸಂತ್ ನಟನೆಯ ರೊಮ್ಯಾಂಟಿಕ್ ಕತೆ ಏಪ್ರಿಲ್ ತಿಂಗಳಿನಲ್ಲಿ ಆರಂಭವಾಯಿತು. ಕೊರೋನಾ ಸಾಂಕ್ರಾಮಿಕ ಮತ್ತು ಮಳೆಯಿಂದಾಗಿ ಶೂಟಿಂಗ್ ಸ್ಥಗಿತವಾಗಿತ್ತು.
ಸದ್ಯ ಮತ್ತೆ ಶೂಟಿಂಗ್ ಆರಂಭಿಸಿರುವ ಚಿತ್ರ ತಂಡ ಬೆಂಗಳೂರಿನಲ್ಲಿ 35 ದಿನಗಳ ಕಾಲ ಚಿತ್ರೀಕರಣ ನಡೆಸಲಿದೆ. ಅದಾದ ನಂತರ ಸಿನಿಮಾ ತಂಡ ಶಿವಮೊಗ್ಗಕ್ಕೆ ತೆರಳಲಿದ್ದು, ಅದಕ್ಕೂ ಮುನ್ನ ಸ್ವಲ್ಪ ಸಮಯ ಬ್ರೇಕ್ ತೆಗೆದುಕೊಳ್ಳಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.
ಹೇಮಂತ್ ರಾವ್ ನಿರ್ದೇಶನದ ಮೂರನೇ ಸಿನಿಮಾ ಇದಾಗಿದೆ, ಈ ಮೊದಲು ಗೋದಿ ಬಣ್ಣ ಸಾಧಾರಣ ಮೈಕಟ್ಟು, ಕವಲು ದಾರಿ ನಿರ್ದೇಶನ ಮಾಡಿದ್ದರು. ರಕ್ಷಿತ್ ಶೆಟ್ಟಿ ಮತ್ತು ಹೇಮಂತ್ ರಾವ್ ಕಾಂಬಿನೇಷನ್ ನ ಎರಡನೇ ಸಿನಿಮಾ ಇದಾಗಿದೆ.
ಪರಮಾವ್ ಸ್ಟುಡಿಯೋಸ್ ನಿರ್ಮಿಸುತ್ತಿರುವ ಈ ಸಿನಿಮಾಗೆ ಚರಣ್ ರಾಜ್ ಸಂಗೀತ ಮತ್ತು ಅಧ್ವೈತ ಗುರುಮೂರ್ತಿಯವರ ಛಾಯಾಗ್ರಹಣವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


