ಕಿಚ್ಚನ ಫ್ಯಾನ್ಸ್ ಗೆ ಸಿಹಿಸುದ್ದಿ: ಕೋಟಿಗೊಬ್ಬ 3 ಸಿನಿಮಾ ರಿಲೀಸ್ ಡೇಟ್ ಕೊನೆಗೂ ಫಿಕ್ಸ್!
ಶಿವ ಕಾರ್ತಿಕ್ ನಿರ್ದೇಶಿಸಿ, ಸೂರಪ್ಪ ಬಾಬು ನಿರ್ಮಿಸಿರುವ ಕಮರ್ಷಿಯಲ್ ಎಂಟರ್ನೈಮೆಂಟ್ ಕೋಟಿಗೊಬ್ಬ3 ಸಿನಿಮಾ ರಿಲೀಸ್ ಡೇಟ್ ಫಿಕ್ಸ್ ಆಗಿದೆ.

ಅಭಿನಯ ಚಕ್ರವರ್ತಿ ಸುದೀಪ್ ನಟನೆಯ ಕೋಟಿಗೊಬ್ಬ3 ಸಿನಿಮಾ ರಿಲೀಸ್ ಡೇಟ್ ಕೊನೆಗೂ ಫಿಕ್ಸ್ ಆಗಿದೆ. ಶಿವ ಕಾರ್ತಿಕ್ ನಿರ್ದೇಶಿಸಿ, ಸೂರಪ್ಪ ಬಾಬು ನಿರ್ಮಿಸಿರುವ ಕಮರ್ಷಿಯಲ್ ಎಂಟರ್ನೈಮೆಂಟ್ ಕೋಟಿಗೊಬ್ಬ3 ಸಿನಿಮಾ ರಿಲೀಸ್ ಡೇಟ್ ಫಿಕ್ಸ್ ಆಗಿದೆ.
ಅಕ್ಟೋಬರ್ 14 ರಂದು ಸಿನಿಮಾ ರಿಲೀಸ್ ಆಗಲಿದೆ, ಸೆಪ್ಟಂಬರ್ 2 ರಂದು ಸುದೀಪ್ ಹುಟ್ಟುಹಬ್ಬವಿದ್ದು, ಅಂದು ಚಿತ್ರತಂಡ ಅಧಿಕೃತ ಮಾಹಿತಿ ನೀಡಲಿದೆ.
ಮಾರ್ಚ್ ನಲ್ಲಿ ಆಡಿಯೋ ಬಿಡುಗಡೆ ಮಾಡಲು ನಿರ್ಧರಿಸಿದ್ದ ಚಿತ್ರತಂಡ ಏಪ್ರಿಲ್ ಕೊನೆಯ ವಾರದಲ್ಲಿ ಸಿನಿಮಾ ರಿಲೀಸ್ ಮಾಡಲು ಪ್ಲಾನ್ ಮಾಡಿತ್ತು, ಆದರೆ ಕೊರೋನಾ ಎರಡನೇ ಅಲೆಯಿಂದಾಗಿ ಬಿಡುಗಡೆಯ ಡೇಟ್ ಮುಂದೂಡಲಾಯಿತು.
ಈಗ ಚಿತ್ರಮಂದಿರಗಳು ಶೇ.100 ಸಾಮರ್ಥ್ಯದಲ್ಲಿ ಪುನಃ ತೆರೆಯಲ್ಪಡುತ್ತಿರುವುದರಿಂದ ಕೋಟಿಗೊಬ್ಬ 3 ರಿಲೀಸ್ ಮಾಡಲು ನಿರ್ಧರಿಸಲಾಗಿದೆ. ಚಿತ್ರದ ಸ್ಯಾಟಲೈಟ್, ಡಿಜಿಟಲ್ ಮತ್ತು ಹಿಂದಿ ಡಬ್ಬಿಂಗ್ ಹಕ್ಕುಗಳನ್ನು ಭಾರೀ ಮೊತ್ತಕ್ಕೆ ಮಾರಾಟ ಮಾಡಲಾಗಿದೆ.
ಈ ಚಿತ್ರದ ಮೂಲಕ ಮಲಯಾಳಂ ನಟಿ ಮಡೋನಾ ಸೆಬಾಸ್ಟಿಯನ್ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಕೋಟಿಗೊಬ್ಬ 3 ಸಿನಿಮಾದಲ್ಲಿ ಬಾಲಿವುಡ್ ನಟರಾದ ಶ್ರದ್ಧ ದಾಸ್, ಅಫ್ತಾಬ್ ಶಿವದಾಸನಿ ಮತ್ತು ರವಿಶಂಕರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಕೋಟಿಗೊಬ್ಬ 3 ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದು, ಶೇಖರ್ ಚಂದ್ರು ಅವರ ಛಾಯಾಗ್ರಹಣವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


