ತ್ರಿವಿಕ್ರಮ ರಘು ನಿರ್ದೇಶನದ ಹೊಸ ಸಿನಿಮಾದಲ್ಲಿ ಡಿಟೆಕ್ಟಿವ್ ಆಗಿ ಪ್ರಿಯಾಂಕಾ ಉಪೇಂದ್ರ!
ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಪ್ರಿಯಾಂಕಾ ಉಪೇಂದ್ರ ಅವರ ಹೊಸ ಸಿನಿಮಾ ಘೋಷಣೆ ಆಗಿದೆ. ಈ ಚಿತ್ರಕ್ಕಿನ್ನೂ ಶೀರ್ಷಿಕೆ ಫೈನಲ್ ಆಗಿಲ್ಲ. ಆದರೆ, ಪ್ರಿಯಾಂಕಾ ಉಪೇಂದ್ರ ಅವರ ಪಾತ್ರ ರಿವೀಲ್ ಆಗಿದೆ.

ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಪ್ರಿಯಾಂಕಾ ಉಪೇಂದ್ರ ಅವರ ಹೊಸ ಸಿನಿಮಾ ಘೋಷಣೆ ಆಗಿದೆ. ಈ ಚಿತ್ರಕ್ಕಿನ್ನೂ ಶೀರ್ಷಿಕೆ ಫೈನಲ್ ಆಗಿಲ್ಲ. ಆದರೆ, ಪ್ರಿಯಾಂಕಾ ಉಪೇಂದ್ರ ಅವರ ಪಾತ್ರ ರಿವೀಲ್ ಆಗಿದೆ.
ತ್ರಿವಿಕ್ರಮ ರಘು ನಿರ್ದೇಶನದ ಇನ್ನೂ ಹೆಸರಿಡದ ಚಿತ್ರದಲ್ಲಿ ಪ್ರಿಯಾಂಕಾ ಉಪೇಂದ್ರ 'ಡಿಟೆಕ್ಟಿವ್ ತೀಕ್ಷ್ಣ' ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಬಿಡುಗಡೆಯಾಗಿರುವ ಈ ಚಿತ್ರದ ಪೋಸ್ಟರ್‌ನಲ್ಲಿ ಪ್ರಿಯಾಂಕಾ ಉಪೇಂದ್ರಗೆ 'ಆಕ್ಷನ್ ಕ್ವೀನ್' ಎಂಬ ಬಿರುದು ನೀಡಲಾಗಿದೆ. ಹೀಗಾಗಿ 'ಡಿಟೆಕ್ಟಿವ್ ತೀಕ್ಷ್ಣ' ಆಗಿ ಪ್ರಿಯಾಂಕಾ ಉಪೇಂದ್ರ ಸಿನಿಮಾದಲ್ಲಿ ಸಿಕ್ಕಾಪಟ್ಟೆ ಆಕ್ಷನ್ ಮಾಡಬಹುದು ಎಂಬ ನಿರೀಕ್ಷೆ ಮೂಡಿದೆ.
ಗೌತಮ್ ಸಿನಿಮಾಸ್ ಪ್ರೈವೇಟ್ ಲಿಮಿಟೆಡ್ ಸಹಯೋಗದಲ್ಲಿ ಶ್ರೀದೇವಿ ಕ್ರಿಯೇಷನ್ ಬ್ಯಾನರ್ ಅಡಿ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಸಿನಿಮಾ ತಯಾರಾಗುತ್ತಿದೆ. ಮಹೂರ್ತದ ದಿನ ಚಿತ್ರದ ಶೀರ್ಷಿಕೆ ಪ್ರಕಟಿಸಲಾಗುವುದು. ಉಳಿದ ಕಲಾವಿದರ ಆಯ್ಕೆ ಮತ್ತು ಸಂಗೀತ ನಿರ್ದೇಶಕರ ಆಯ್ಕೆ ನಂತರ ಮಾಡಲಾಗುವುದು.
ಚಿತ್ರಕ್ಕೆ ಮನು ದಾಸಪ್ಪ ಛಾಯಾಗ್ರಹಣವಿದೆ. ಸೆಪ್ಟೆಂಬರ್‌ನಲ್ಲಿ ಈ ಸಿನಿಮಾದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ಮೂಡಿಗೆರೆ, ಚಿಕ್ಕಮಗಳೂರು ಮತ್ತು ಉಪ್ಪಿನಂಗಡಿ ಸುತ್ತಮುತ್ತ ಶೂಟಿಂಗ್ ನಡೆಯಲಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


