ಸಿನಿಮಾ ಸುದ್ದಿ

Shivaram Health Update: ಕೋಮಾಗೆ ಜಾರಿದ ಹಿರಿಯ ನಟ ಶಿವರಾಂ; ಆರೋಗ್ಯ ಸ್ಥಿತಿ ಚಿಂತಾಜನಕ

ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ(84) ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಕೋಮಾಗೆ ಸ್ಥಿತಿಗೆ ತಲುಪಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.

Shivaram Health Update: ಕೋಮಾಗೆ ಜಾರಿದ ಹಿರಿಯ ನಟ ಶಿವರಾಂ; ಆರೋಗ್ಯ ಸ್ಥಿತಿ ಚಿಂತಾಜನಕ
ನಟ ಶಿವರಾಂ
Published On :

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ (84) ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಕೋಮಾಗೆ ಸ್ಥಿತಿಗೆ ತಲುಪಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.

ಇತ್ತೀಚಿಗೆ ಕಾರಿನಲ್ಲಿ ಶಿವರಾಂ ಹೊರಗೆ ಹೋಗಿದ್ದರು. ಆ ವೇಳೆ ಅಪಘಾತ ಸಂಭವಿಸಿ ತಲೆಗೆ ಸ್ವಲ್ಪ ಪೆಟ್ಟಾಗಿತ್ತು. ಬಳಿಕ ಕುಟುಂಬಸ್ಥರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷೆ ನಡೆಸಿದಾಗ ವರದಿಯಲ್ಲಿ ಯಾವುದೇ ಸಮಸ್ಯೆಗಳೂ ಪತ್ತೆಯಾಗಿರಲಿಲ್ಲ. 

ಕಳೆದ ಮಂಗಳವಾರ ರಾತ್ರಿ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ನಡೆಸಲಾಗಿದ್ದು, ಪೂಜೆ ಮಾಡಲು ಶಿವರಾಂ ಅವರು ಪೂಜೆ ಮನೆಗೆ ಹೋದಾಗ ಕೆಳಗೆ ಬಿದ್ದಿದ್ದಾರೆ. ಈ ವೇಳೆ ತಲೆಗೆ ಗಂಭೀರವಾಗಿ ಪೆಟ್ಟಾಗಿದೆ. ಆಸ್ಪತ್ರೆಗೆ ದಾಖಲಿಸಿದ ವೇಳೆ ಮಿದುಳಿನಲ್ಲಿ ರಕ್ತಸ್ರಾವವಾಗಿರುವುದು ಕಂಡು ಬಂದಿದೆ. 

ಇದೀಗ ಶಿವರಾಂ ಅವರು ಕೋಮಾ ಸ್ಥಿತಿಗೆ ತಲುಪಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.