ನಟ ಕಮಲ್ ಹಾಸನ್ ಕೋವಿಡ್-19 ನಿಂದ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್
ಎರಡು ವಾರಗಳ ಕೋವಿಡ್-19 ಚಿಕಿತ್ಸೆ ಬಳಿಕ ಗುಣಮುಖರಾಗಿರುವ ನಟ ಕಮಲ್ ಹಾಸನ್ ಶನಿವಾರ ಶ್ರೀ ರಾಮಚಂದ್ರ ವೈದ್ಯಕೀಯ ಸೆಂಟರ್ ನಿಂದ ಡಿಸ್ಚಾರ್ಜ್ ಆದರು. ಕಮಲ್ ಹಾಸನ್ ಆಸ್ಪತ್ರೆಯಿಂದ ಹೊರಗಡೆ ಬರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಶೇರ್ ಆಗಿದೆ.

ಚೆನ್ನೈ: ಎರಡು ವಾರಗಳ ಕೋವಿಡ್-19 ಚಿಕಿತ್ಸೆ ಬಳಿಕ ಗುಣಮುಖರಾಗಿರುವ ನಟ ಕಮಲ್ ಹಾಸನ್ ಶನಿವಾರ ಶ್ರೀ ರಾಮಚಂದ್ರ ವೈದ್ಯಕೀಯ ಸೆಂಟರ್ ನಿಂದ ಡಿಸ್ಚಾರ್ಜ್ ಆದರು. ಕಮಲ್ ಹಾಸನ್ ಆಸ್ಪತ್ರೆಯಿಂದ ಹೊರಗಡೆ ಬರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಶೇರ್ ಆಗಿದೆ.
ಸಾಮಾಜಿಕ ಜಾಲತಾಣದ ಮೂಲಕ ತಮಿಳಿನಲ್ಲಿ ನೋಟ್ ವೊಂದನ್ನು ಬರೆದಿರುವ ಕಮಲ್ ಹಾಸನ್, ವೈದ್ಯರು, ಸ್ನೇಹಿತರು ಹಾಗೂ ಅವರ ಹಿತೈಷಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಕೋವಿಡ್-19 ಪಾಸಿಟಿವ್ ವರದಿ ಬಂದ ನಂತರ ನವೆಂಬರ್ 22 ರಂದು ಕಮಲ್ ಹಾಸನ್ ಆಸ್ಪತ್ರೆಗೆ ದಾಖಲಾಗಿದ್ದರು. ನವೆಂಬರ್ ನಲ್ಲಿ ಚಿಕಾಗೋದಿಂದ ವಾಪಸ್ಸಾದ ನಂತರ ಒಣ ಕೆಮ್ಮು ಕಾಣಿಸಿಕೊಂಡಿತ್ತು. ತದನಂತರ ಎರಡು ವಾರಗಳ ಕಾಲ ಆಸ್ಪತ್ರೆಯಲ್ಲಿ ಸ್ವಯಂ ಆಗಿಯೇ ಐಸೋಲೇಟೆಡ್ ಆಗಿದ್ದರು.
ಮುಂಜಾಗ್ರತೆಯಿಂದ ಬೇಗ ಗುಣಮುಖರಾಗಬಹುದು, ಆರೋಗ್ಯ ಸರಿಯಿಲ್ಲ ಅನಿಸಿದಾಗ ಕೂಡಲೇ ಕ್ರಮ ಕೈಗೊಳ್ಳಬೇಕು, ಸೋಂಕಿನಿಂದ ನಾನು ಗುಣಮುಖರಾಗಿರುವುದಾಗಿ ಅವರು ಫೋಸ್ಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


