ಸಾಮಿ ಸಾಮಿ ಹಾಡಿಗೆ 'ರೀಲ್' ಮಾಡಿದ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್
ನಟಿ ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ ಸಿನಿಮಾದ ಸಾಮಿ ಸಾಮಿ ಹಾಡು ಇತ್ತೀಚೆಗೆ ಸಖತ್ ಫೇಮಸ್ ಆಗಿದೆ. ಇದರಲ್ಲಿ ಲಂಗ ದಾವಣಿ ತೊಟ್ಟ ರಶ್ಮಿಕಾ ಇದೀಗ ಮಾಡ್ರನ್ ಡ್ರೆಸ್ ತೊಟ್ಟು ಇದೇ ಹಾಡಿಗೆ ಕುಣಿದಿದ್ದಾರೆ.

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ ಸಿನಿಮಾದ ಸಾಮಿ ಸಾಮಿ ಹಾಡು ಇತ್ತೀಚೆಗೆ ಸಖತ್ ಫೇಮಸ್ ಆಗಿದೆ. ಇದರಲ್ಲಿ ಲಂಗ ದಾವಣಿ ತೊಟ್ಟ ರಶ್ಮಿಕಾ ಇದೀಗ ಮಾಡ್ರನ್ ಡ್ರೆಸ್ ತೊಟ್ಟು ಇದೇ ಹಾಡಿಗೆ ಕುಣಿದಿದ್ದಾರೆ.
ಅಲ್ಲು ಅರ್ಜುನ್ ಅಭಿನಯಿಸಿರುವ ಹಾಡಿನ ಸಿಗ್ನೇಚರ್ ಸ್ಟೆಪ್ ಹಾಕಿರುವ ವೀಡಿಯೊವನ್ನು ಹಂಚಿಕೊಂಡ ರಶ್ಮಿಕಾ ಮಂದಣ್ಣ “ನಿಮ್ಮಲ್ಲಿ ಅನೇಕರು ಸಾಮಿ ಸಾಮಿ ಹಾಡಿಗೆ ರೀಲ್ ಮಾಡುವುದನ್ನು ನಾನು ನೋಡಿದ್ದೇನೆ ಮತ್ತು ನಾನು ಕೂಡ ನಿಮ್ಮ ಗುಂಪಿಗೆ ಸೇರಲು ಇಚ್ಛಿಸುತ್ತೇನೆ. ಹಾಗಾಗಿ ನಾನು ಕೂಡ ಒಂದು ರೀಲ್ ಮಾಡಿದ್ದೇನೆ. ನಿಮ್ಮಲ್ಲಿ ಇನ್ನೂ ಅನೇಕರು ಈ ಹಾಡಿಗೆ ರೀಲ್ ಮಾಡುವ ಮೂಲಕ ನಮ್ಮ ಸಮೂಹಕ್ಕೆ ಸೇರಿಕೊಳ್ಳುತ್ತೀರಾ ಎಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.
ಸಾಮಿ ಸಾಮಿಯನ್ನು ರಾಜಲಕ್ಷ್ಮಿ ಸೆಂಥಿಗಣೇಶ್ ಹಾಡಿದ್ದಾರೆ ಮತ್ತು ವಿವೇಕ ಅವರ ಸಾಹಿತ್ಯ ಮತ್ತು ದೇವಿ ಶ್ರೀ ಪ್ರಸಾದ್ ಸಂಗೀತವಿದೆ. ಈ ಸಿನಿಮಾವು ಆಂಧ್ರಪ್ರದೇಶದ ರಾಯಲಸೀಮಾ ಪ್ರದೇಶದ ಶೇಷಚಲಂ ಬೆಟ್ಟಗಳಲ್ಲಿ ನಡೆಯುತ್ತಿರುವ ಕೆಂಪು ಮರಳು ಕಳ್ಳಸಾಗಣೆ ಕಥೆಯ ಹಂದರ ಹೊಂದಿದೆ.
ಈ ಸಿನಿಮಾವನ್ನು ಸುಕುಮಾರ್ ನಿರ್ದೇಶಿಸಿದ್ದು, ಮುತ್ತಂಶೆಟ್ಟಿ ಮೀಡಿಯಾ ಸಹಯೋಗದಲ್ಲಿ ಮೈತ್ರಿ ಮೂವೀ ಮೇಕರ್ಸ್ ಸಿನಿಮಾ ನಿರ್ಮಾಣ ಮಾಡಿದೆ.
ರಶ್ಮಿಕಾ ಮಂದಣ್ಣ, ಅಲ್ಲು ಅರ್ಜುನ್ ಮತ್ತು ಫಹದ್ ಫಾಸಿಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಪುಷ್ಪ ಸಿನಿಮಾವು ಡಿಸೆಂಬರ್ 17 ರಂದು ತೆಲುಗು, ಮಲಯಾಳಂ, ತಮಿಳು, ಕನ್ನಡ ಮತ್ತು ಹಿಂದಿ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


