ಪುಷ್ಪ ಚಿತ್ರದಲ್ಲಿನ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಹಸಿಬಿಸಿ ದೃಶ್ಯಗಳಿಗೆ ಚಿತ್ರತಂಡ ಕತ್ತರಿ
ಪುಷ್ಪಾ: ದಿ ರೈಸ್ ಸಿನಿಮಾ ಕೇವಲ ಎರಡು ದಿನಗಳಲ್ಲಿ ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 100 ಕೋಟಿ ರೂ. ಗೂ ಅಧಿಕ ಹಣವನ್ನು ಗಳಿಸಿದೆ. ಡಿಸೆಂಬರ್ 17ರಂದು ಬಿಡುಗಡೆಯಾದ ಈ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸುತ್ತಿದೆ.

ಪುಷ್ಪ- ದಿ ರೈಸ್-1 ಸಿನಿಮಾವನ್ನು ಸುಕುಮಾರ್ ನಿರ್ದೇಶಿಸಿದ್ದು, ಮೂರು ಗಂಟೆಗಳ ಅವಧಿಯನ್ನು ಹೊಂದಿದೆ. ಇದೀಗ ಈ ಸಿನಿಮಾದ ನಿರ್ಮಾಪಕರು ನಟ ಅಲ್ಲು ಅರ್ಜುನ್ ಮತ್ತು ನಟಿ ರಶ್ಮಿಕಾ ಮಂದಣ್ಣ ಅವರ ವಿವಾದಾತ್ಮಕ ರೊಮ್ಯಾಂಟಿಕ್ ದೃಶ್ಯವನ್ನು ತೆಗೆದುಹಾಕಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.
ರನ್ಟೈಮಿಂಗ್ನನ್ನು ಕಡಿಮೆ ಮಾಡಲು ಅವರು ಸಿನಿಮಾದಿಂದ ಈ ದೃಶ್ಯವನ್ನು ತೆಗೆದುಹಾಕಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ.
ಪುಷ್ಪಾ: ದಿ ರೈಸ್ ಸಿನಿಮಾ ಕೇವಲ ಎರಡು ದಿನಗಳಲ್ಲಿ ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 100 ಕೋಟಿ ರೂ. ಗೂ ಅಧಿಕ ಹಣವನ್ನು ಗಳಿಸಿದೆ. ಡಿಸೆಂಬರ್ 17ರಂದು ಬಿಡುಗಡೆಯಾದ ಈ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸುತ್ತಿದೆ.
ಚಿತ್ರವು ಮೂರು ಗಂಟೆಗಳ ಕಾಲ ಓಡುವುದರಿಂದ, ಒಂದು ದೃಶ್ಯವನ್ನು ತೆಗೆದುಹಾಕಲು ನಿರ್ಮಾಪಕರು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆ ಒಂದು ದೃಶ್ಯದಲ್ಲಿ, ಪುಷ್ಪಾ ರಾಜ್ (ಅಲ್ಲು ಅರ್ಜುನ್) ಮತ್ತು ಶ್ರೀವಲ್ಲಿ (ರಶ್ಮಿಕಾ ಮಂದಣ್ಣ) ಕಾರಿನಲ್ಲಿ ಕುಳಿತು ರೋಮ್ಯಾನ್ಸ್ ಮಾಡುತ್ತಿರುವುದು ಕಂಡುಬರುತ್ತದೆ. ಸಂಭಾಷಣೆಯ ಸಮಯದಲ್ಲಿ, ಪುಷ್ಪಾ ಶ್ರೀವಲ್ಲಿಯ ಎದೆಯನ್ನು ಮುಟ್ಟುತ್ತಾನೆ ಮತ್ತು ಅವರು ಅದರ ಬಗ್ಗೆ ಸಂಭಾಷಣೆ ನಡೆಸುತ್ತಾರೆ. ಈ ದೃಶ್ಯವನ್ನು ಕುಟುಂಬಸ್ಥರೆಲ್ಲಾರು ಕುಳಿತು ನೋಡಲು ಸಾಧ್ಯವಿಲ್ಲ. ಹಾಗಾಗಿ ನಿರ್ಮಾಪಕರು ಈ ದೃಶ್ಯವನ್ನು ತೆಗೆದು ಹಾಕಿದ್ದಾರೆ ಎನ್ನಲಾಗ್ತಿದೆ.
ಅಲ್ಲದೇ ಚಿತ್ರದ ಹೆಚ್ಚಿನ ದೃಶ್ಯಗಳನ್ನು ತೆಗೆದುಹಾಕಲಾಗಿದೆ ಎಂದು ಹೇಳಲಾಗುತ್ತಿದೆ. ವರದಿಗಳ ಪ್ರಕಾರ, ಕೆಲವು ದೃಶ್ಯಗಳನ್ನು ತೆಗೆದ ಸಿನಿಮಾ ಆವೃತ್ತಿಯು ಸೋಮವಾರದಿಂದ (ಡಿಸೆಂಬರ್ 20) ಥಿಯೇಟರ್‌ಗಳಲ್ಲಿ ಪ್ರದರ್ಶನಗೊಳ್ಳಲಿದೆ.
ಪುಷ್ಪ: ದಿ ರೈಸ್-1 ಸಿನಿಮಾವು ಆಂಧ್ರಪ್ರದೇಶದ ಶೇಷಾಚಲಂ ಅರಣ್ಯದಲ್ಲಿ ಕೆಂಪು ಚಂದನದ ಕಳ್ಳಸಾಗಾಣಿಕೆದಾರರ ಜೀವನವನ್ನು ಆಧರಿಸಿದೆ. ಚಿತ್ರ ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ. ಎರಡನೇ ಭಾಗ, ಪುಷ್ಪ: ದಿ ರೂಲ್, 2022ರಲ್ಲಿ ಚಿತ್ರಮಂದಿರಗಳಿಗೆ ಬರಲಿದೆ.
ಪುಷ್ಪಾ ಚಿತ್ರದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಮತ್ತು ಫಹದ್ ಫಾಸಿಲ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ಬೃಹತ್ ಬಜೆಟ್‌ನಲ್ಲಿ ನಿರ್ಮಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


