ಸಿನಿಮಾ ಸುದ್ದಿ

ನಾಗಶೇಖರ್ ಗೆ ಮಹಿಳೆಯಿಂದ ದೋಖಾ: ಪೊಲೀಸ್ ಠಾಣೆ ಮೆಟ್ಟಿಲೇರಿದ ಖ್ಯಾತ ನಿರ್ದೇಶಕ

ಸ್ಯಾಂಡಲ್​ವುಡ್​​ನ ಖ್ಯಾತ ನಿರ್ದೇಶಕ ನಾಗಶೇಖರ್ ತಮಗೆ ವಂಚನೆಯಾಗಿದೆ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. 50 ಲಕ್ಷ ರೂಪಾಯಿ ವಂಚಿಸಲಾಗಿದೆ ಎಂದು ಬೆಂಗಳೂರಿನ ಆರ್.ಆರ್ ನಗರ ಪೊಲೀಸ್ ಠಾಣೆಗೆ ನಿರ್ದೇಶಕ ದೂರು ನೀಡಿದ್ದಾರೆ.

ನಾಗಶೇಖರ್ ಗೆ ಮಹಿಳೆಯಿಂದ ದೋಖಾ: ಪೊಲೀಸ್ ಠಾಣೆ ಮೆಟ್ಟಿಲೇರಿದ ಖ್ಯಾತ ನಿರ್ದೇಶಕ
ನಾಗಶೇಖರ್
Published On :

ಸ್ಯಾಂಡಲ್​ವುಡ್​​ನ ಖ್ಯಾತ ನಿರ್ದೇಶಕ ನಾಗಶೇಖರ್ ತಮಗೆ ವಂಚನೆಯಾಗಿದೆ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. 50 ಲಕ್ಷ ರೂಪಾಯಿ ವಂಚಿಸಲಾಗಿದೆ ಎಂದು ಬೆಂಗಳೂರಿನ ಆರ್.ಆರ್ ನಗರ ಪೊಲೀಸ್ ಠಾಣೆಗೆ ನಿರ್ದೇಶಕ ದೂರು ನೀಡಿದ್ದಾರೆ.

ಆರ್.ಆರ್ ನಗರದ ಮೀನಾ ಹಾಗೂ ರಾಜ್​ಕುಮಾರ್ ವಿರುದ್ಧ ದೂರು ನೀಡಲಾಗಿದೆ. ಮನೆ ಖರೀದಿಗೆ ಮಾತನಾಡಿ, ನಾಗಶೇಖರ್ ಹಣ ನೀಡಿದ್ದರು. ಇದೀಗ ಮನೆಯನ್ನು ಬೇರೆಯವರಿಗೆ ಮಾರಾಟ ಮಾಡಲಾಗಿದೆ. ಇತ್ತ ಹಣವೂ ಇಲ್ಲ, ಮನೆಯೂ ಇಲ್ಲ; ತಮಗೆ ವಂಚನೆಯಾಗಿದೆ ಎಂದು ನಾಗಶೇಖರ್ ದೂರಿನಲ್ಲಿ ತಿಳಿಸಿದ್ದಾರೆ.

ಆರ್​.ಆರ್​.ನಗರದ ಜಯಣ್ಣ ಲೇಔಟ್‌ನಲ್ಲಿ ಮನೆ ಖರೀದಿ ಮಾಡಲು ಮುಂದಾಗಿದ್ದ ನಿರ್ದೇಶಕ ನಾಗಶೇಖರ್, ಅದಕ್ಕಾಗಿ 2 ಕೋಟಿ 70 ಲಕ್ಷ ರೂ.ಗೆ ಮೀನಾ ಎಂಬುವವರ ಬಳಿ ಮಾತುಕತೆ ನಡೆಸಿದ್ದರು. 2020ರ ಆಗಸ್ಟ್‌ನಲ್ಲಿ ಸೇಲ್ ಅಗ್ರಿಮೆಂಟ್ ಮಾಡಿಕೊಳ್ಳಲಾಗಿತ್ತು. ಅಗ್ರಿಮೆಂಟ್ ಬಳಿಕ ಹಂತ ಹಂತವಾಗಿ ಮೀನಾ ಅವರ ಖಾತೆಗೆ ಹಣ ವರ್ಗಾವಣೆ ಮಾಡಿದ್ದ ನಾಗಶೇಖರ್, ಒಟ್ಟು 50 ಲಕ್ಷ ರು. ನೀಡಿದ್ದರು.

ಆದರೆ ಈಗ ಮತ್ತೊಬ್ಬರಿಗೆ ಮನೆ ಮಾರಾಟ ಮಾಡಲಾಗಿದೆ ಎಂದು ನಿರ್ದೇಶಕ ನಾಗಶೇಖರ್ ದೂರು ನೀಡಿದ್ದಾರೆ. ಅಲ್ಲದೇ ಸೇಲ್ ಅಗ್ರಿಮೆಂಟ್ ಬಳಿಕ ಪಡೆದಿದ್ದ 50 ಲಕ್ಷ ರೂ ಹಣವನ್ನು ವಾಪಸ್ ನೀಡಿಲ್ಲ ಎಂದು ನಿರ್ದೇಶಕ ಆರೋಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.