ಕೇವಲ ಪ್ರಚಾರಕ್ಕಾಗಿ ಬಂದ್ ಮಾಡಿದರೆ ನಮ್ಮ ಬೆಂಬಲವಿಲ್ಲ: ನಟ ನಿಖಿಲ್ ಕುಮಾರಸ್ವಾಮಿ
ಕೇವಲ ಮಾಧ್ಯಮದಲ್ಲಿ ಪ್ರಚಾರ ಪಡೆಯಲು ಬಂದ್ ಮಾಡಿದರೆ ನಮ್ಮ ಬೆಂಬಲವಿರುವುದಿಲ್ಲ ಎಂದು ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರು ಭಾನುವಾರ ಹೇಳಿದ್ದಾರೆ.

ರಾಮನಗರ: ಕೇವಲ ಮಾಧ್ಯಮದಲ್ಲಿ ಪ್ರಚಾರ ಪಡೆಯಲು ಬಂದ್ ಮಾಡಿದರೆ ನಮ್ಮ ಬೆಂಬಲವಿರುವುದಿಲ್ಲ ಎಂದು ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರು ಭಾನುವಾರ ಹೇಳಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಅವರು ಅಭಿನಯಿಸಿರುವ ರೈಡರ್ ಸಿನಿಮಾ ರಾಜ್ಯಾದ್ಯಂತ ಡಿಸೆಂಬರ್ 22ರಂದು ಬಿಡುಗಡೆಗೊಂಡಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ಇಂದು ಈ ಸಿನಿಮಾದ ಪ್ರಮೋಷನ್‍ಗಾಗಿ ರಾಮನಗರದ ಶಾನ್ ಚಿತ್ರಮಂದಿರಕ್ಕೆ ನಿಖಿಲ್ ಭೇಟಿ ನೀಡಿದ್ದರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 31 ನೇ ತಾರೀಖು ಕರ್ನಾಟಕ ಬಂದ್ ಕರೆ ನೀಡಿರುವುದರಿಂದ ನಮ್ಮ ಚಿತ್ರರಂಗಕ್ಕೆ ಬಹಳ ದೊಡ್ಡ ಹೊಡೆತ ಬೀಳಲಿದೆ. 31ನೇ ದಿನಾಂಕ ಹಲವು ಕನ್ನಡ ಸಿನಿಮಾಗಳು ಬಿಡುಗಡೆ ಆಗಲಿದ್ದು, ಆ ಸಿನಿಮಾಗಳಿಗೆ ಹೊಡೆತ ಬೀಳಲಿದೆ. ನಮಗೆ ಮೊದಲ 3 ದಿನದ ಕಲೆಕ್ಷನ್ ಬಹಳ ಮುಖ್ಯ. ಆದರೆ ಆ ದಿನವೇ ಬಂದ್ ಮಾಡಿದರೆ ತೊಂದರೆಯಾಗುತ್ತದೆ. ಸಾರ್ವಜನಿಕರಿಗೆ ಸಹಾಯವಾಗುತ್ತದೆ ಎಂದರೆ ಬಂದ್ ಮಾಡಲಿ. ಆದರೆ ಕೇವಲ ಮಾಧ್ಯಮದಲ್ಲಿ ಪ್ರಚಾರ ಪಡೆಯಲು ಬಂದ್ ಮಾಡಬಾರದು. ಆ ರೀತಿಯ ಬಂದ್‍ಗೆ ಯಾವುದೇ ಕಾರಣಕ್ಕೂ ನಾವು ಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


