ಸಿನಿಮಾ ಸುದ್ದಿ

ರಜನಿ ಕಾಂತ್ ಅಭಿನಯದ ಬಹುನಿರೀಕ್ಷಿತ ‘ಅನ್ನತ್ತೆ’ ದೀಪಾವಳಿಗೆ ಬಿಡುಗಡೆ

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಮುಂದಿನ ಬಹುನಿರೀಕ್ಷಿತ 'ಅನ್ನತ್ತೆ' ಈ ಬಾರಿಯ ದೀಪಾವಳಿಗೆ ಬಿಡುಗಡೆಯಾಗಲಿದೆ.

ರಜನಿ ಕಾಂತ್ ಅಭಿನಯದ ಬಹುನಿರೀಕ್ಷಿತ ‘ಅನ್ನತ್ತೆ’ ದೀಪಾವಳಿಗೆ ಬಿಡುಗಡೆ
ರಜನಿಕಾಂತ್
Published On :

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಮುಂದಿನ ಬಹುನಿರೀಕ್ಷಿತ 'ಅನ್ನತ್ತೆ' ಈ ಬಾರಿಯ ದೀಪಾವಳಿಗೆ ಬಿಡುಗಡೆಯಾಗಲಿದೆ.

ಈ ಚಿತ್ರವನ್ನು ನಿರ್ಮಾಣ ಮಾಡಿರುವ ಸನ್ ಪಿಕ್ಚರ್ಸ್ ಗುರುವಾರ ಈ ವಿಷಯವನ್ನು ತಿಳಿಸಿದೆ.ದೀಪಾವಳಿಗಾಗಿ ಅನ್ನತ್ತೆಗೆ ನೀವು ಸಿದ್ಧರಿದ್ದೀರಾ? ಎಂದು ಕಲಾನಿಧಿ ಮಾರನ್ ಮಾಲಿಕತ್ವದ ಸನ್ ಪಿಕ್ಚರ್ಸ್ ಪ್ರೇಕ್ಷಕರನ್ನು ಕೇಳಿದೆ.

ಶಿವ ನಿರ್ದೇಶನದ ಈ ಚಿತ್ರದಲ್ಲಿ  ನಯನ ತಾರಾ, ಮೀನಾ, ಖುಷ್ಬೂ ಸುಂದರ್, ಪ್ರಕಾಶ್ ರಾಜ್ ಸೇರಿದಂತೆ ಮತ್ತಿತರ ಕಲಾವಿದರ ದಂಡೆ ಇದೆ. 2021 ನವೆಂಬರ್ 4ಕ್ಕೆ ಈ ಚಿತ್ರ ತೆರೆಗೆ ಅಪ್ಪಳಿಸಲಿದೆ. ಡಿ ಇಮಾನ್ ಅನ್ನತ್ತೆ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.