'ವಿಕ್ರಾಂತ್ ರೋಣ'ಗೆ ಹೆಜ್ಜೆ ಹಾಕಲು ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಬೆಂಗಳೂರಿಗೆ!
ಕಿಚ್ಚ ಸುದೀಪ್ ಅವರ ಬಹುನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ನಟಿಸುತ್ತಾರೆ ಎಂದು ಈ ಹಿಂದೆ ಸುದ್ದಿಯಾಗಿತ್ತು. ಅದು ದೃಢವಾಗಿದ್ದು ನಟಿ ಚಿತ್ರದಲ್ಲಿ ವಿಶೇಷ ಹಾಡೊಂದಕ್ಕೆ ಹೆಜ್ಜೆ ಹಾಕಲಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ಕಿಚ್ಚ ಸುದೀಪ್ ಅವರ ಬಹುನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ನಟಿಸುತ್ತಾರೆ ಎಂದು ಈ ಹಿಂದೆ ಸುದ್ದಿಯಾಗಿತ್ತು. ಅದು ದೃಢವಾಗಿದ್ದು ನಟಿ ಚಿತ್ರದಲ್ಲಿ ವಿಶೇಷ ಹಾಡೊಂದಕ್ಕೆ ಹೆಜ್ಜೆ ಹಾಕಲಿದ್ದಾರೆ ಎಂದು ತಿಳಿದುಬಂದಿದೆ.
ಚಿತ್ರತಂಡ ಹಾಡಿನ ಬಗ್ಗೆ ಗೌಪ್ಯವಾಗಿಟ್ಟಿದೆ. ತಮ್ಮ ಭಾಗದ ಚಿತ್ರೀಕರಣಕ್ಕೆ ಇನ್ನು ಕೆಲವೇ ದಿನಗಳಲ್ಲಿ ಬೆಂಗಳೂರಿಗೆ ನಟಿ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ಹಾಡಿಗಾಗಿ ಕಲಾ ನಿರ್ದೇಶಕ ಶಿವಕುಮಾರ್ ಬೃಹತ್ ಸೆಟ್ ನ್ನು ಸಿದ್ದಪಡಿಸಿದ್ದಾರೆ. ಹಾಡಿನ ಚಿತ್ರೀಕರಣದೊಂದಿಗೆ ಚಿತ್ರದ ಶೂಟಿಂಗ್ ಮುಕ್ತಾಯವಾಗಲಿದೆ.
ವಿಕ್ರಾಂತ್ ರೋಣ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲಸ ನಡೆಯುತ್ತಿದ್ದು ಸುದೀಪ್ ಅವರ ಡಬ್ಬಿಂಗ್ ಮುಗಿದಿದೆ. 14 ಭಾಷೆಗಳಲ್ಲಿ ತೆರೆಗೆ ಬರಲಿರುವ ವಿಕ್ರಾಂತ್ ರೋಣ ಫ್ರೆಂಚ್, ಅರೆಬಿಕ್, ಸ್ಪ್ಯಾನಿಷ್, ಮಂಡರಿನ್ ಮತ್ತು ರಷ್ಯಾ ಭಾಷೆಗಳಿಗೆ ಕೂಡ ಡಬ್ ಆಗಲಿದೆ. ಚಿತ್ರದಲ್ಲಿ ಕಿಚ್ಚ ಸುದೀಪ್ ಅವರದ್ದು ಪೊಲೀಸ್ ಪಾತ್ರ.
ಬಿಗ್ ಬಜೆಟ್ ಸಿನಿಮಾದಲ್ಲಿ ನಿರೂಪ್ ಭಂಡಾರಿ, ನೀತಾ ಅಶೋಕ್ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. 3ಡಿ ಮಾದರಿಯಲ್ಲಿ ಚಿತ್ರ ತೆರೆಗೆ ಬರಲಿದ್ದು ಅಜನೀಶ್ ಲೋಕನಾಥ್ ಅವರ ಸಂಗೀತ, ವಿಲಿಯಮ್ ಡೇವಿಡ್ ಅವರ ಛಾಯಾಗ್ರಹಣವಿದೆ. ಮಂಜುನಾಥ್ ಗೌಡ ಅವರು ನಿರ್ಮಿಸುತ್ತಿರುವ ಚಿತ್ರವನ್ನು ಅನೂಪ್ ಭಂಡಾರಿ ನಿರ್ದೇಶಿಸುತ್ತಿದ್ದು 50ಕ್ಕೂ ಹೆಚ್ಚು ದೇಶಗಳಲ್ಲಿ ತೆರೆಗೆ ಬರಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


