ಸಿನಿಮಾ ಸುದ್ದಿ

ವರಮಹಾಲಕ್ಷ್ಮಿ ಹಬ್ಬಕ್ಕೆ ದುನಿಯಾ ವಿಜಯ್ ನಟನೆಯ 'ಸಲಗ' ಸಿನಿಮಾ ರಿಲೀಸ್

ವರಮಹಾಲಕ್ಷ್ಮಿ ಹಬ್ಬಕ್ಕೆ ವಿಜಿ ಅಭಿಮಾನಿಗಳಿಗೆ ಸಂತೋಷದ ಸುದ್ದಿಯೊಂದನ್ನು ಅನೌನ್ಸ್ ಮಾಡಲಾಗಿದೆ. ದುನಿಯಾ ವಿಜಯ್ ನಟನೆಯ 'ಸಲಗ' ಸಿನಿಮಾ ಇದೇ ಅಗಸ್ಟ್‌ 20ರಂದು ರಿಲೀಸ್ ಆಗುತ್ತಿದೆ.

ವರಮಹಾಲಕ್ಷ್ಮಿ ಹಬ್ಬಕ್ಕೆ ದುನಿಯಾ ವಿಜಯ್ ನಟನೆಯ 'ಸಲಗ' ಸಿನಿಮಾ ರಿಲೀಸ್
ದುನಿಯಾ ವಿಜಯ್
Published On :

ವರಮಹಾಲಕ್ಷ್ಮಿ ಹಬ್ಬಕ್ಕೆ ವಿಜಿ ಅಭಿಮಾನಿಗಳಿಗೆ ಸಂತೋಷದ ಸುದ್ದಿಯೊಂದನ್ನು ಅನೌನ್ಸ್ ಮಾಡಲಾಗಿದೆ. ದುನಿಯಾ ವಿಜಯ್ ನಟನೆಯ 'ಸಲಗ' ಸಿನಿಮಾ ಇದೇ ಅಗಸ್ಟ್‌ 20ರಂದು ರಿಲೀಸ್ ಆಗುತ್ತಿದೆ. 

ಇಷ್ಟು ದಿನಗಳ ಕಾಲ ತೆರೆ ಮೇಲೆ ನಾಯಕನಾಗಿ ಮಿಂಚುತ್ತಿದ್ದ ವಿಜಯ್ 'ಸಲಗ' ಚಿತ್ರದ ಮೂಲಕ ನಿರ್ದೇಶಕರಾಗಿ ಎಂಟ್ರಿ ಕೊಡುತ್ತಿದ್ದಾರೆ. ಕೆಪಿ ಶ್ರೀಕಾಂತ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಕೆಮಿಸ್ಟ್ರಿ ಆಫ್ ಕರಿಯಪ್ಪ ಚಿತ್ರದ ಸಂಜಯ್ ಆನಂದ್ ನಾಯಕಿಯಾಗಿದ್ದಾರೆ. 

ಕೊರೋನಾ ಎರಡನೇ ಅಲೆ ಲಾಕ್‌ಡೌನ್‌ಗೂ ಮುನ್ನವೇ ಸಲಗ ಚಿತ್ರದ ಪ್ರಮೋಷನ್‌ ಸಾಂಗ್ ಚಿತ್ರೀಕರಣ ಮಾಡಲಾಗಿತ್ತು. ದುಬಾರಿ ಸೆಟ್ ಹಾಕುವ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಏಪ್ರಿಲ್ 15 ರಂದು ಸಿನಿಮಾ ರಿಲೀಸ್ ಮಾಡಲು ಚಿತ್ರ ತಂಡ ನಿರ್ಧರಿಸಿತ್ತು, ಆದರೆ ಕೊರೋನಾ ಲಾಕ್ ಡೌನ್ ಕಾರಣ ರಿಲೀಸ್ ಮೂಂದೂಡಲಾಗಿತ್ತು. ಅಚ್ಯುತ ಕುಮಾರ್, ರಂಘಾಯಣ ರಘು ಸೇರಿದಂತೆ ಹಲವು ಪ್ರಮುಖ ಕಲಾವಿದರು ನಟಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.