ಡಾಲಿ ಧನಂಜಯ್ ನಟನೆಯ 'ಬಡವ ರಾಸ್ಕಲ್' ಸೆಪ್ಟಂಬರ್ 24ಕ್ಕೆ ರಿಲೀಸ್
ಕೋವಿಡ್-19 ಸಾಂಕ್ರಾಮಿಕದಿಂದ ಬಹುತೇಕ ಚಿತ್ರರಂಗದ ಕೆಲಸಗಳು ಸ್ಥಗಿತವಾಗಿದ್ದವು. ಶೂಟಿಂಗ್ ಮುಗಿಸಿ ಬಿಡುಗಡೆಗಾಗಿ ಕಾಯುತ್ತಿದ್ದ ಚಿತ್ರಗಳಿಗೆ ಕೊರೊನಾ ಅಡ್ಡಿಯಾಗಿತ್ತು

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕದಿಂದ ಬಹುತೇಕ ಚಿತ್ರರಂಗದ ಕೆಲಸಗಳು ಸ್ಥಗಿತವಾಗಿದ್ದವು. ಶೂಟಿಂಗ್ ಮುಗಿಸಿ ಬಿಡುಗಡೆಗಾಗಿ ಕಾಯುತ್ತಿದ್ದ ಚಿತ್ರಗಳಿಗೆ ಕೊರೊನಾ ಅಡ್ಡಿಯಾಗಿತ್ತು. ಇದೀಗ ಲಾಕ್ಡೌನ್ ಸಡಿಲಿಕೆಯಾಗಿರುವ ಕಾರಣ ಸಿನಿಮಾ ಪ್ರದರ್ಶನಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಡಾಲಿ ಧನಂಜಯ್ ನಟನೆಯ ‘ಬಡವ ರಾಸ್ಕಲ್’ ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಈ ಬಗ್ಗೆ ಸ್ವತಃ ನಟ ಡಾಲಿ ಧನಂಜಯ್ ತಮ್ಮ ಫೇಸ್‌ಬುಕ್ ಮತ್ತು ಟ್ವೀಟರ್ ಖಾತೆಯಲ್ಲಿ ಚಿತ್ರದ ಪೋಸ್ಟರ್ ಸಹಿತ ಮಾಹಿತಿ ನೀಡಿದ್ದಾರೆ.
‘ಪಕ್ಕ ಮಿಡಲ್ ಕ್ಲಾಸ್ ಗ್ಯಾಂಗ್ ಸ್ಟರ್ ಜೊತೆಗೆ “ಬಡವ ರಾಸ್ಕಲ್” ಆಗಿ ನಿಮ್ಮ ಮುಂದೆ ಬರುತ್ತಿದ್ದೇನೆ. ಇದೆ ಸೆಪ್ಟೆಂಬರ್ 24ಕ್ಕೆ ನಿಮ್ಮ ನೆಚ್ಚಿನ ಚಿತ್ರಮಂದಿರಗಳಲ್ಲಿ ಸಿನಿಮಾ ರೀಲೀಸ್ ಆಗಲಿದೆ. ಎಂದಿನಂತೆಯೆ ನಿಮ್ಮ ಪ್ರೀತಿ ಆಶೀರ್ವಾದ ಇರಲಿ’ ಎಂದು ಅವರು ಬರೆದುಕೊಂಡಿದ್ದಾರೆ.
ಸೆ.24ಕ್ಕೆ ರಾಜ್ಯಾದ್ಯಂತ ತೆರೆ ಕಾಣಲಿರುವ ‘ಬಡವ ರಾಸ್ಕಲ್’ ಚಿತ್ರವು ಭಾರೀ ನಿರೀಕ್ಷೆ ಹುಟ್ಟುಹಾಕಿದೆ. ಧನಂಜಯ್ ಹೇಳಿರುವಂತೆಯೇ ಇದು ಮಿಡಲ್ ಕ್ಲಾಸ್ ಹುಡುಗನೊಬ್ಬನ ಕಥೆಯಾಗಿದ್ದು, ಪೋಸ್ಟರ್, ಟೀಸರ್ ಮತ್ತು ಟ್ರೈಲರ್ ಮೂಲಕ ಗಮನ ಸೆಳೆದಿದೆ. ಸಹಾಯಕ ನಿರ್ದೇಶಕರಾಗಿದ್ದ ಗುರು ಶಂಕರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಯುವ ಗಾಯಕ ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ.
ಚಿತ್ರದಲ್ಲಿ ಧನಂಜಯ್ ಜೊತೆ ನಟಿ ಅಮೃತಾ ಅಯ್ಯಂಗಾರ್ ತೆರೆ ಹಂಚಿಕೊಂಡಿದ್ದಾರೆ. ‘ಪಾಪ್‌ಕಾರ್ನ್ ಮಂಕಿ ಟೈಗರ್’ ಬಳಿಕ ಈ ಜೋಡಿ ಮತ್ತೆ ಒಂದಾಗಿದೆ.
ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಧನಂಜಯ್ ಜೊತೆ ಗುಜ್ಮಾಲ್ ಪುರುಷೋತ್ತಮ್ ಬಂಡವಾಳ ಹೂಡಿದ್ದಾರೆ. ‘ಟಗರು’ ಸಿನಿಮಾದ ಡಾಲಿ ಪಾತ್ರದ ಮೂಲಕ ಸಖತ್ ಸೌಂಡ್ ಮಾಡಿದ್ದ ನಟ ಧನಂಜಯ್ ಈಗ ಸ್ಯಾಂಡಲ್ ವುಡ್ ನ ಬ್ಯುಸಿ ನಟರಾಗಿದ್ದಾರೆ. ಅವರ ಕೈಯಲ್ಲಿಗ ಅನೇಕ ಸಿನಿಮಾಗಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


