ಚಿತ್ರೀಕರಣ ವೇಳೆ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಗೋವಿಂದೇ ಗೌಡಗೆ ಅಪಘಾತ, ಆಸ್ಪತ್ರೆಗೆ ದಾಖಲು
ಚಿತ್ರಿಕರಣ ಸಮಯದಲ್ಲಿ ಅಪಘಾತವಾಗಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಗೋವಿಂದೇ ಗೌಡ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರು: ಚಿತ್ರಿಕರಣ ಸಮಯದಲ್ಲಿ ಅಪಘಾತವಾಗಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಗೋವಿಂದೇ ಗೌಡ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಖ್ಯಾತಿಯ ನಟ ಗೋವಿಂದೇಗೌಡಗೆ ಅಪಘಾತಕ್ಕೀಡಾಗಿದ್ದು, ನಿನ್ನೆ ಸಂಜೆ ಚಿತ್ರೀಕರಣದ ವೇಳೆ ಅಪಘಾತ ಸಂಭವಿಸಿದೆ. ಪ್ರಸ್ತುತ ಅವರನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ವಿಚಾರವಾಗಿ ನಟ ಜಗ್ಗೇಶ್ ಟ್ವೀಟ್ ಮಾಡಿದ್ದು. 'ಕಾಮಿಡಿಕಿಲಾಡಿ ನಟ GG ಗೋವಿಂದೆಗೌಡನಿಗೆ ಚಿತ್ರಿಕರಣ ಸಮಯದಲ್ಲಿ ಅಪಘಾತವಾಗಿ BGS ಆಸ್ಪತ್ರೆಯಲ್ಲಿ ದಾಖಲಾಗಿರುವ ದಯಮಾಡಿ ಅವನಿಗೆ ಏನು ಆಗದಂತೆ ನೀವು ಪ್ರಾರ್ಥನೆ ಮಾಡಿ..ನಾನು ಗಣಪತಿಗೆ ಪ್ರಾರ್ಥಿಸಿ ಆಸ್ಪತ್ರೆಗೆ ಹೊರಟೆ” ಎಂದು ತಿಳಿಸಿದ್ದಾರೆ.
ಈಗ ತಾನೆ ಗೋವಿಂದೇ ಗೌಡನನ್ನ ಭೇಟಿ ಮಾಡಿದೆ.. ರಾಯರ ಆಶೀರ್ವಾದದಿಂದ ಕ್ಷೇಮವಾಗಿದ್ದಾನೆ.. ನಾನು, ಭಟ್ರು ಮತ್ತು ಶರಣ ಜೊತೆಗಿದ್ದೇವೆ.. ನಿಮ್ಮ ಹಾರೈಕೆಯಿರಲಿ..
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


