ಸಿನಿಮಾ ಸುದ್ದಿ

'ಮ್ಯಾನ್‌ ಆಫ್‌ ದಿ ಮ್ಯಾಚ್‌' ಚಿತ್ರದಲ್ಲಿ ವಾಸುಕಿ ವೈಭವ್!

ನಟ, ಸಂಗೀತ ನಿರ್ದೇಶಕ, ಗಾಯಕ ವಾಸುಕಿ ವೈಭವ್ ಬಹಮುಖ ಪ್ರತಿಭೆಯಾಗಿರುವ, ಬಿಗ್ ಬಾಸ್ ಕನ್ನಡ ಸೀಸನ್ 7ರ ಸ್ಪರ್ಧಿ ವಾಸುಕಿ ವೈಭಸ್ ಅವರು ನಿರ್ದೇಶಕ ಡಿ. ಸತ್ಯಪ್ರಕಾಶ್ ನಿರ್ದೇಶದನ ಮ್ಯಾನ್ ಆಫ್ ದಿ ಮ್ಯಾಚ್ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

'ಮ್ಯಾನ್‌ ಆಫ್‌ ದಿ ಮ್ಯಾಚ್‌' ಚಿತ್ರದಲ್ಲಿ ವಾಸುಕಿ ವೈಭವ್!
ವಾಸುಕಿ ವೈಭವ್
Published On :

ನಟ, ಸಂಗೀತ ನಿರ್ದೇಶಕ, ಗಾಯಕ ವಾಸುಕಿ ವೈಭವ್ ಬಹಮುಖ ಪ್ರತಿಭೆಯಾಗಿರುವ, ಬಿಗ್ ಬಾಸ್ ಕನ್ನಡ ಸೀಸನ್ 7ರ ಸ್ಪರ್ಧಿ ವಾಸುಕಿ ವೈಭಸ್ ಅವರು ನಿರ್ದೇಶಕ ಡಿ. ಸತ್ಯಪ್ರಕಾಶ್ ನಿರ್ದೇಶದನ ಮ್ಯಾನ್ ಆಫ್ ದಿ ಮ್ಯಾಚ್ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 

‘ರಾಮಾ ರಾಮಾ ರೇ’ ಖ್ಯಾತಿಯ ಸತ್ಯಪ್ರಕಾಶ್​ ಅವರು ನಿರ್ದೇಶನ ಮಾಡುತ್ತಿರುವ ಮೂರನೇ ಚಿತ್ರ ಮ್ಯಾನ್​ ಆಫ್​ ದಿ ಮ್ಯಾಚ್​ ಆಗಿದ್ದು, ಚಿತ್ರಕ್ಕೆ ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಬಂಡವಾಳ ಹೂಡುತ್ತಿದ್ದಾರೆ. 

ಶೂಟಿಂಗ್​ ಪೂರ್ಣಗೊಳಿಸಿರುವ ಈ ಸಿನಿಮಾದಲ್ಲಿ ವಾಸುಕಿ ವೈಭವ್​ ಒಂದು ವಿಶೇಷ ಪಾತ್ರದಲ್ಲಿ ನಟಿಸಿರುವುದು ಮಾತ್ರವಲ್ಲದೆ, ಸಂಗೀತ ನಿರ್ದೇಶನ ಮಾಡಿದ್ದಾರೆ.

ಚಿತ್ರದ ಒಂದು ಹಾಡಿನಲ್ಲಿ ವಾಸುಕಿ ವೈಭವ್ ಅವರು ಬಿಂದಾಸ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಹಲವಾರು ಸೂಪರ್​ ಹಿಟ್​ ಹಾಡುಗಳನ್ನು ಬರೆದಿರುವ ನಿರ್ದೇಶಕ ಯೋಗರಾಜ್​ ಭಟ್​ ಅವರ ಬತ್ತಳಿಕೆಯಿಂದಲೇ ಈ ಗೀತೆ ಹೊರಬಂದಿದೆ.

ಇದೊಂದು ಫೂಟ್-ಟ್ಯಾಪಿಂಗ್ ಆಗಿದೆ. ಚಿತ್ರದ ಆರಂಭದಲ್ಲಿ ಹಾಡನ್ನಿರಿಸಲಾಗಿದ್ದು, ಥೀಮ್ ಸಾಂಗ್ ಆಗಿದೆ ಎಂದು ನಿರ್ದೇಶಕರು ಹೇಳಿದ್ದಾರೆ. 

ಪುನೀತ್​ ರಾಜ್​ಕುಮಾರ್​ ಅವರ ಪಿಆರ್​ಕೆ ಪ್ರೊಡಕ್ಷನ್ಸ್​, ಸತ್ಯ & ಮಯೂರ ಪಿಕ್ಚರ್ಸ್​ ಜೊತೆಗೂಡಿ ಈ ಸಿನಿಮಾ ನಿರ್ಮಿಸುತ್ತಿವೆ. ಚಿತ್ರದಲ್ಲಿ ಬಹುತೇಕ ಹೊಸ ಕಲಾವಿದರೇ ನಟಿಸಿರುವುದು ವಿಶೇಷವಾಗಿದೆ. 120ಕ್ಕೂ ಹೆಚ್ಚು ಮಂದಿ ಹೊಸಬರಿಗೆ ಇದರಲ್ಲಿ ಅವಕಾಶ ನೀಡಲಾಗಿದೆ.

‘ರಾಮಾ ರಾಮಾ ರೇ’ ಚಿತ್ರದಲ್ಲಿದ್ದ ಧರ್ಮಣ್ಣ ಕಡೂರು ಮತ್ತು ನಟರಾಜ್​ ಅವರು ‘ಮ್ಯಾನ್ ಆಫ್​ ದಿ ಮ್ಯಾಚ್​​’ನಲ್ಲೂ ಅಭಿನಯಿದ್ದಾರೆ. ಸಂಗೀತ ನಿರ್ದೇಶಕರಾದ ನೋಬಿನ್ ಪಾಲ್ ಮತ್ತು ವಾಸುಕಿ ವೈಭವ್ ಚಿತ್ರಕ್ಕೆ ಸಂಗೀತ ನೀಡಿದ್ದು, ಲವಿತ್ ಕುಮಾರ್ ಮತ್ತು ಮದನ್ ಕಟೋಕರ್ ಕ್ಯಾಮೆರಾ ನಿರ್ವಹಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.