3000 ಸಿನಿಮಾ ಕಾರ್ಮಿಕರಿಗೆ ತಲಾ 5000 ರೂ.: ಒಂದೂವರೆ ಕೋಟಿ ರು. ಪರಿಹಾರ ಘೋಷಿಸಿದ ನಟ ಯಶ್
ಕೊರೋನಾದಿಂದ ಸಂಕಷ್ಟದಲ್ಲಿರುವ ರಾಕಿಂಗ್ ಸ್ಟಾರ್ ಯಶ್ ಸಂಕಷ್ಟದಲ್ಲಿರುವ ಸಿನಿಮಾ ತಂತ್ರಜ್ಞರ ಸಹಾಯಕ್ಕೆ ಮುಂದಾಗಿದ್ದಾರೆ.

ಕೊರೋನಾದಿಂದ ಸಂಕಷ್ಟದಲ್ಲಿರುವ ರಾಕಿಂಗ್ ಸ್ಟಾರ್ ಯಶ್ ಸಂಕಷ್ಟದಲ್ಲಿರುವ ಸಿನಿಮಾ ತಂತ್ರಜ್ಞರ ಸಹಾಯಕ್ಕೆ ಮುಂದಾಗಿದ್ದಾರೆ.
ತಮ್ಮದೇ ಹಣದಿಂದ ಒಟ್ಟೂ 3,000 ತಂತ್ರಜ್ಞರ ಖಾತೆಗೆ ತಲಾ 5,000 ರೂಪಾಯಿ ಹಾಕುತ್ತಿರುವ ಬಗ್ಗೆ ಯಶ್ ಘೋಷಣೆ ಮಾಡಿದ್ದಾರೆ. ಈ ವಿಚಾರ ಕೇಳಿದ ಅಭಿಮಾನಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ.
ತಂತ್ರಜ್ಞರಿಗೆ ಸಹಾಯ ಮಾಡುತ್ತಿರುವ ಬಗ್ಗೆ ಯಶ್ ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿದ್ದಾರೆ. ಅವರು ನೀಡುತ್ತಿರುವ ಒಟ್ಟೂ ಹಣ ಬರೋಬ್ಬರಿ ಒಂದೂವರೆ ಕೋಟಿ ರೂಪಾಯಿ ಆಗಲಿದೆ.
ಕಣ್ಣಿಗೆ ಕಾಣದ ವೈರಸ್ ಮನುಷ್ಯನ ಬದುಕನ್ನು ಹೆಚ್ಚುಕಮ್ಮಿ ಬುಡಮೇಲು ಮಾಡಿದೆ. ಅದರಲ್ಲೂ ಕಳೆದೊಂದು ವರ್ಷದಿಂದ ನನ್ನ ಸಿನಿಮಾ ಕುಟುಂಬ ಅಸಹಾಯಕತೆಯಿಂದ ಕೈಕಟ್ಟಿ ಕುಳಿತಿದೆ. ಹೌದು. ಇದು ಬರೀ ಮಾತನಾಡುವ ಸಮಯವಲ್ಲ. ಸಂಕಷ್ಟದಲ್ಲಿರುವ ಸಿನಿಮಾ ಕುಟುಂಬದ ಜೊತೆ ನಿಲ್ಲುವ ಸಮಯ. ಹಾಗಾಗಿ ಚಿತ್ರರಂಗದ 21 ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 3,000ಕ್ಕೂ ಹೆಚ್ಚಿರುವ ನಮ್ಮ ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಅಧಿಕೃತ ಖಾತೆಗಳಿಗೆ ತಲಾ 5 ಸಾವಿರ ಹಣವನ್ನ ತನ್ನ ಸಂಪಾದನೆಯ ಹಣದಿಂದ ಭರಿಸಲು ನಿರ್ಧರಿಸಿದ್ದೇನೆ. ಈ ಬಗ್ಗೆ ಈಗಾಗಲೇ ನಮ್ಮ ಒಕ್ಕೂಟದ ಅಧ್ಯಕ್ಷರಾದ ಸಾ.ರಾ.ಗೋವಿಂದ್ ಮತ್ತು ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರನಾಥ್ ಅವರೊಂದಿಗೆ ಚರ್ಚಿಸಿದ್ದೇನೆ. ನಮ್ಮ ಕಲಾವಿದರು, ತಂತ್ರಜ್ಞರು ಮತ್ತು ಕಾರ್ಮಿಕರ ಅಧಿಕೃತ ಬ್ಯಾಂಕ್ ವಿವರ ತಲುಪಿದ ತಕ್ಷಣವೇ ಇದು ಕಾರ್ಯರೂಪಕ್ಕೆ ಬರಲಿದೆ’ ಎಂದು ಯಶ್ ತಿಳಿಸಿದ್ದಾರೆ.
ಈ ಸಣ್ಣ ಸಹಾಯ ಈಗ ಎದುರಾಗಿರುವ ಎಲ್ಲ ಕಷ್ಟಗಳಿಗೂ ಪರಿಹಾರ ಎಂಬುವುದು ನನ್ನ ಭಾವನೆಯಲ್ಲ. ಬದಲಿಗೆ ಶಕ್ತಿ ಇರುವ ಹೃದಯವಂತರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಂಕಷ್ಟದಲ್ಲಿರುವ ಜನಸಮುದಾಯದ ಜೊತೆ ಹೆಗಲಿಗೆ ಹೆಗಲು ಕೊಟ್ಟು ನಿಂತು ಸಹಾಯ ಮಾಡಿದರೆ, ನಾನು ಮಾಡಿದ ಪ್ರಯತ್ನಕ್ಕೂ ಸಾರ್ಥಕತೆ ಬರುತ್ತದೆ ಎನ್ನುವುದು ನನ್ನ ಆಶಯ’ ಎಂದು ತಮ್ಮ ಪೋಸ್ಟ್ನಲ್ಲಿ ಯಶ್ ಉಲ್ಲೇಖಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


