ಕನ್ನಡದ ಹಿರಿಯ ನಟಿ ಸುರೇಖಾ ನಿಧನ
ವರನಟ ಡಾ. ರಾಜ್‌ಕುಮಾರ್ ಜತೆ "ತ್ರಿಮೂರ್ತಿ"ಯಲ್ಲಿ ನಟಿಸಿದ್ದ ಕನ್ನಡದ ಹಿರಿಯ ನಟಿ ಸುರೇಖಾ (66) ಹೃದಯಾಘಾತದಿಂದ ನಿಧನರಾದರು.

ವರನಟ ಡಾ. ರಾಜ್‌ಕುಮಾರ್ ಜತೆ "ತ್ರಿಮೂರ್ತಿ"ಯಲ್ಲಿ ನಟಿಸಿದ್ದ ಕನ್ನಡದ ಹಿರಿಯ ನಟಿ ಸುರೇಖಾ (66) ಹೃದಯಾಘಾತದಿಂದ ನಿಧನರಾದರು.
160ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸುರೇಖಾ ಬೆಂಗಳೂರು ನಗರದಲ್ಲಿ ನಿಧನರಾದರು. ಮಣ್ಣಿನ ಮಕ್ಕಳು, ಸಂಭ್ರಮ, ಕಿಂಗ್, ಶಂಕರ್ ಸುಂದರ್, ಆಲೆಮನೆ, ಬಿಳಿಗಿರಿಯ ಬನದಲ್ಲಿ ಚಿತ್ರಗಳಲ್ಲಿ ರಾಜ್‌ಕುಮಾರ್ ಜತೆ ನಟಿಸಿದ್ದಾರೆ.
ನಟಿ ಸೆನ್ಸಾರ್ ಬೋರ್ಡ್ ಸದಸ್ಯೆ ಹಾಗೂ ಸ್ಟೇಟ್ ಅವಾರ್ಡ್ ಕಮಿಟಿಯ ಸದಸ್ಯೆಯಾಗಿದ್ದರು
ಸುರೇಖಾ ಅವರಿಗೆ ವಿವಾಹವಾಗಿರಲಿಲ್ಲ, ಸೋದರಿ ಶಾರದಾ ಹಾಗೂ ಪ್ರೇಮಾ ಅವರನ್ನು ಅಗಲಿರುವ ನಟಿಯ ಅಂತ್ಯ ಸಂಸ್ಕಾರ ಇಂದು ಬನಶಂಕರಿ ಚಿತಾಗಾರದಲ್ಲಿ ನೆರವೇರಲಿದೆ ಎಂದು ಮೂಲಗಳು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


