ಸಿನಿಮಾ ಸುದ್ದಿ

'ದುಬಾರಿ' ವಿಚಾರ ಸದ್ಯಕ್ಕಿಲ್ಲ: ನಿರ್ಮಾಪಕ ಉದಯ್ ಮೆಹ್ತಾ

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯಿಸಬೇಕಿದ್ದ 'ದುಬಾರಿ' ಸಿನಿಮಾದಿಂದ ನಂದಕಿಶೋರ್ ಹೊರಬಂದಿದ್ದಾರೆ ಎಂಬ ಸುದ್ದಿ ಬಗ್ಗೆ ನಿರ್ಮಾಪಕ ಉದಯ್ ಕೆ ಮೆಹ್ತಾ ಸ್ಪಷ್ಟನೆ ನೀಡಿದ್ದಾರೆ.

'ದುಬಾರಿ' ವಿಚಾರ ಸದ್ಯಕ್ಕಿಲ್ಲ: ನಿರ್ಮಾಪಕ ಉದಯ್ ಮೆಹ್ತಾ
ನಿರ್ದೇಶಕ ನಂದ ಕಿಶೋರ್, ಧ್ರುವ ಸರ್ಜಾ
Published On :

ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯಿಸಬೇಕಿದ್ದ 'ದುಬಾರಿ' ಸಿನಿಮಾದಿಂದ ನಂದ ಕಿಶೋರ್ ಹೊರಬಂದಿದ್ದಾರೆ ಎಂಬ ಸುದ್ದಿ ಬಗ್ಗೆ ನಿರ್ಮಾಪಕ ಉದಯ್ ಕೆ ಮೆಹ್ತಾ ಸ್ಪಷ್ಟನೆ ನೀಡಿದ್ದಾರೆ. ನಿರ್ದೇಶಕರು ಹೊರ ನಡೆಯುವುದು ಹಾಗಿರಲಿ, ಚಿತ್ರ ನಿರ್ಮಾಣವನ್ನೇ ಮುಂದೂಡಲಾಗಿದೆ. ದುಬಾರಿ ವಿಚಾರ ಸದ್ಯಕ್ಕಿಲ್ಲ ಎಂದು ಹೇಳಿದ್ದಾರೆ.

'ಪೊಗರು' ಸಿನಿಮಾ ಬಿಡುಗಡೆಗೂ ಮುಂಚೆಯೇ ನಿರ್ದೇಶಕ ನಂದ ಕಿಶೋರ್ ಹಾಗೂ ಧ್ರುವ ಸರ್ಜಾ ಕಾಂಬಿನೇಶನ್‌ನಲ್ಲಿ 'ದುಬಾರಿ' ಸಿನಿಮಾ ಮೂಡಿಬರುತ್ತದೆ ಎಂದು ಹೇಳಲಾಗಿತ್ತು. ಆದರೆ ಈಗ ಈ ಸಿನಿಮಾದಲ್ಲಿ ನಂದ ಕಿಶೋರ್ ಇರೋದಿಲ್ಲ ಎಂದು ಹೇಳಲಾಗುತ್ತಿದೆ.

ಆದರೆ, ಈ ಕುರಿತಂತೆ ಪ್ರತಿಕ್ರಿಯಿಸಿರುವ ನಿರ್ಮಾಪಕ ಉದಯ್ ಕೆ ಮೆಹ್ತಾ, ನಂದಕಿ ಶೋರ್​ ಸಿನಿಮಾದಿಂದ ಹೊರ ನಡೆದಿದ್ದಾರೆ ಎನ್ನುವುದು ಸುಳ್ಳು. ನಂದ ಕಿಶೋರ್ ಅವರೇ ‘ದುಬಾರಿ’ ಸಿನಿಮಾ ನಿರ್ದೇಶನ ಮಾಡಲಿದ್ದಾರೆ. ಆದರೆ, ಸಿನಿಮಾವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಅಷ್ಟೇ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.