ಸಂಚಾರಿ ವಿಜಯ್ ಮೆದುಳು ನಿಷ್ಕ್ರಿಯ, ಅಂಗಾಂಗ ದಾನ: ವೈದ್ಯರು
ಶನಿವಾರ ಅಪಘಾತಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿದ್ದ ನಟ ಸಂಚಾರಿ ವಿಜಯ್ ಅವರ ಮೆದುಳು ನಿಷ್ಕ್ರಿಯಗೊಂಡಿದ್ದು, ಅಂಗಾಂಗ ದಾನ ಮಾಡುವುದಕ್ಕೆ ಕುಟುಂಬ ಸದಸ್ಯರು ನಿರ್ಧರಿಸಿದ್ದಾರೆ.

ಬೆಂಗಳೂರು: ಶನಿವಾರ ಅಪಘಾತಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿದ್ದ ನಟ ಸಂಚಾರಿ ವಿಜಯ್ ಅವರ ಮೆದುಳು ನಿಷ್ಕ್ರಿಯಗೊಂಡಿದ್ದು, ಅಂಗಾಂಗ ದಾನ ಮಾಡುವುದಕ್ಕೆ ಕುಟುಂಬ ಸದಸ್ಯರು ನಿರ್ಧರಿಸಿದ್ದಾರೆ.
ಸಂಚಾರಿ ವಿಜಯ್ ಅವರ ಆರೋಗ್ಯ ಪರಿಸ್ಥಿತಿಯ ಬಗ್ಗೆ ಅಪೋಲೋ ಆಸ್ಪತ್ರೆಯ ವೈದ್ಯ ಡಾ. ಅರುಣ್ ನಾಯ್ಕ್ ಮಾಹಿತಿ ನೀಡಿದ್ದು, ಸಂಚಾರಿ ವಿಜಯ್ ಅವರ ಮೆದುಳಿಗೆ ಸಂಬಂಧಿಸಿದಂತೆ ಎರಡು ಅಪ್ನಿಯಾ ಟೆಸ್ಟ್ ಮಾಡಲಾಗಿದ್ದು, ವಿಜಯ್ ಅವರ ಮೆದುಳು ನಿಷ್ಕ್ರಿಯಗೊಂಡಿರುವುದು ದೃಢಪಟ್ಟಿದ್ದು, ಬ್ರೈನ್ ಡೆಡ್ ಆಗಿದೆ ಎಂದು ಹೇಳಿದ್ದಾರೆ. ವಿಜಯ್ ಅವರ ಅಂಗಾಂಗ ದಾನಕ್ಕೆ ಕುಟುಂಬ ಸದಸ್ಯರು ನಿರ್ಧರಿಸಿದ್ದು, ಈ ಪ್ರಕ್ರಿಯೆ ರಾತ್ರಿ 9:30 ರ ವೇಳೆಗೆ ಪ್ರಾರಂಭವಾಗಲಿದೆ.
ಬೆಳಿಗ್ಗೆ ವೇಳೆಗೆ ವಿಜಯ್ ಅವರ ಮೃತದೇಹ ಕುಟುಂಬ ಸದಸ್ಯರಿಗೆ ಹಸ್ತಾಂತರವಾಗಲಿದ್ದು, ಬೆಳಿಗ್ಗೆ 8-10 ವೇಳೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ನಂತರ ವಿಜಯ್ ಅವರ ಹುಟ್ಟೂರಾದ ಚಿಕ್ಕಮಗಳೂರಿನ ಕಡೂರಿನ ಪಂಚನಹಳ್ಳಿಯಲ್ಲಿ ಅಂತ್ಯಸಂಸ್ಕಾರ ನಡೆಸಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


