ಹೆಲ್ಮೆಟ್ ಧರಿಸಿದ್ದರೆ ಸಂಚಾರಿ ವಿಜಯ್ ಬದುಕುಳಿಯುಳಿಸುವ ಸಾಧ್ಯತೆ ಇತ್ತೇ?
ನಟ ಸಂಚಾರಿ ವಿಜಯ್ ತಮ್ಮ ಸ್ನೇಹಿತನ ಬೈಕ್‌ನಲ್ಲಿ ಹೋಗುವಾಗ ಹೆಲ್ಮೆಟ್ ಧರಿಸದಿರುವುದೇ ಅಪಾಯಕ್ಕೆ ಕಾರಣ ಎಂಬುದಾಗಿ ತಿಳಿದು ಬಂದಿದೆ.

ಬೆಂಗಳೂರು: ನಟ ಸಂಚಾರಿ ವಿಜಯ್ ತಮ್ಮ ಸ್ನೇಹಿತನ ಬೈಕ್‌ನಲ್ಲಿ ಹೋಗುವಾಗ ಹೆಲ್ಮೆಟ್ ಧರಿಸದಿರುವುದೇ ಅಪಾಯಕ್ಕೆ ಕಾರಣ ಎಂಬುದಾಗಿ ತಿಳಿದು ಬಂದಿದೆ.
‘ಬೈಕ್ ಚಲಾಯಿಸುತ್ತಿದ್ದ ನವೀನ್ ಹಾಗೂ ಹಿಂಬದಿ ಕುಳಿತಿದ್ದ ನಟ ಸಂಚಾರಿ ವಿಜಯ್ ಇಬ್ಬರೂ ಹೆಲ್ಮೆಟ್ ಧರಿಸಿರಲಿಲ್ಲ. ಹೀಗಾಗಿಯೇ ಬೈಕ್‌ನಿಂದ ಬಿದ್ದ ವಿಜಯ್ ತಲೆಗೆ ತೀವ್ರ ಪೆಟ್ಟು ಬಿದ್ದು ಮಿದುಳು ನಿಷ್ಕ್ರಿಯವಾಗುವ ಹಂತಕ್ಕೆ ಬಂದಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಇನ್ನು, ಬೈಕ್ ಸ್ಕಿಡ್ ಆಗಿ ಬಿದ್ದಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ನವೀನ್ ಎಂಬುವವರು ಬೈಕ್ ಓಡಿಸುತ್ತಿದ್ದರು. ವಿಜಯ್ ಹಿಂದೆ ಕೂತಿದ್ದರು. ಇಬ್ಬರೂ ಹೆಲ್ಮೆಟ್ ಧರಿಸಿರಲಿಲ್ಲ. ಸ್ಕಿಡ್ ಆದ ಪರಿಣಾಮ ಬೈಕ್ ರಸ್ತೆಯ ಎಡಬದಿಯಲ್ಲಿದ್ದ ಪೋಲ್ಗೆ ಡಿಕ್ಕಿಯಾಗಿದೆ.
ಈ ವೇಳೆ ವಿಜಯ್ ಬೈಕ್ ನಿಂದ ಹಾರಿ ಬಿದ್ದಿದ್ದಾರೆ. ಸ್ಥಳೀಯರ ಸಹಾಯದಿಂದ ಸಮೀಪದಲ್ಲಿದ್ದ ಅಪಾರ್ಟ್ಮೆಂಟ್ನಲ್ಲಿ ಬೈಕ್ ಇರಿಸಿ, ಇಬ್ಬರೂ ಗಾಯಾಳುಗಳನ್ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಹೆಲ್ಮೆಟ್ ಧರಿಸಿದ್ದರೆ ಅವರ ತಲೆಗೆ ಇಷ್ಟೊಂದು ಪೆಟ್ಟು ಬೀಳುತ್ತಿರಲಿಲ್ಲ ಎನ್ನುವ ಮಾತು ಕೇಳಿ ಬಂದಿದೆ.
ಸಂಚಾರಿ ವಿಜಯ್ ಹೆಲ್ಮೆಟ್ ಧರಿಸಿದ್ದರೆ ತಲೆಗೆ ಹೆಚ್ಚು ಪೆಟ್ಟಾಗುತ್ತಿರಲಿಲ್ಲ. ಸವಾರ ನವೀನ್, ಸಂಚಾರ ನಿಯಮಗಳನ್ನು ಪಾಲಿಸಿ ನಿಗದಿತ ವೇಗದಲ್ಲಿ ಬೈಕ್ ಚಲಾಯಿಸಿದ್ದರೂ ಅವಘಡ ಸಂಭವಿಸುತ್ತಿರಲಿಲ್ಲ ಎಂದೂ ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


