ಸಿನಿಮಾ ಸುದ್ದಿ

'ಮನುಷ್ಯ-ಪ್ರಕೃತಿ ಸಂಘರ್ಷ' ಕುರಿತ ಸಿನಿಮಾ ನಿರ್ದೇಶಿಸಲಿದ್ದಾರೆ ರಿಷಬ್ ಶೆಟ್ಟಿ

ನಟ ರಿಷಬ್ ಶೆಟ್ಟಿ ಮತ್ತೊಂದು ಸಿನಿಮಾಗೆ ಅಣಿಯಾಗುತ್ತಿದ್ದಾರೆ. ಹೊಸದೊಂದು ಕಥೆ ಸಿಕ್ಕಿದೆ, ನಿಮ್ಮ ಪ್ರೀತಿ, ಹಾರೈಕೆ ಸದಾ ಹೀಗೆ ಇರಲಿ ಎಂದು ರಿಷಬ್ ಟ್ವೀಟ್ ಮಾಡಿದ್ದಾರೆ.

'ಮನುಷ್ಯ-ಪ್ರಕೃತಿ ಸಂಘರ್ಷ' ಕುರಿತ ಸಿನಿಮಾ ನಿರ್ದೇಶಿಸಲಿದ್ದಾರೆ ರಿಷಬ್ ಶೆಟ್ಟಿ
ರಿಷಬ್ ಶೆಟ್ಟಿ
Published On :

ನಟ ರಿಷಬ್ ಶೆಟ್ಟಿ ಮತ್ತೊಂದು ಸಿನಿಮಾಗೆ ಅಣಿಯಾಗುತ್ತಿದ್ದಾರೆ. ಹೊಸದೊಂದು ಕಥೆ ಸಿಕ್ಕಿದೆ, ನಿಮ್ಮ ಪ್ರೀತಿ, ಹಾರೈಕೆ ಸದಾ ಹೀಗೆ ಇರಲಿ ಎಂದು ರಿಷಬ್ ಟ್ವೀಟ್ ಮಾಡಿದ್ದಾರೆ.

ಕಥೆಗಾಗಿ ರಿಷಬ್ ಸೂಕ್ತ ಟೈಟಲ್ ಹುಡುಕಾಟದಲ್ಲಿದ್ದಾರೆ. ಈ ಹಂತದಲ್ಲಿ ಸಿನಿಮಾ ಬಗ್ಗೆ ಹೆಚ್ಚಿನ ವಿವರ ನೀಡಲು ಸಾಧ್ಯವಿಲ್ಲ, ಆದರೆ ಇದೊಂದು ಪ್ರಕೃತಿ ಮತ್ತು ಮನುಷ್ಯನ ನಡುವಿನ ಸಂಘರ್ಷ ಕುರಿತ ಕಥೆಯಾಗಿದೆ ಎಂದು ಹೇಳಿದ್ದಾರೆ.

ಕೋವಿಡ್ ಎರಡನೇ ಅಲೆಯ ವೇಳೆ ನನ್ನ ಊರಿನಲ್ಲಿ ನಾನು ಕ್ಯಾಂಪಿಂಗ್ ಮಾಡುವಾಗ ಹೊಳೆದ ಕಥೆ ಇದಾಗಿದೆ, ಶೀಘ್ರದಲ್ಲೆ ಕಥೆಯ ಬಗ್ಗೆ ಅಧಿಕೃತವಾಗಿ ಹೆಚ್ಚಿನ ವಿವರ ಹಂಚಿಕೊಳ್ಳುವೆ ಎಂದು ಹೇಳಿದ್ದಾರೆ.

ದೊಡ್ಡ ಬಜೆಟ್ ಸಿನಿಮಾ ಮಾಡಲು ರಿಷಬ್ ಶೆಟ್ಟಿ ಪ್ಲಾನ್ ಮಾಡಿದ್ದಾರೆ., ಆದರೆ ಪ್ರೊಡಕ್ಷನ್ ಹೌಸ್ ಬಗ್ಗೆ ಅವರು ಮಾಹಿತಿ ನೀಡಿಲ್ಲ. ಅದು ಸರ್ಪೈಸ್ ಎಂದು ರಿಷಬ್ ಶೆಟ್ಟಿ ತಿಳಿಸಿದ್ದಾರೆ. ಸದ್ಯ ರುದ್ರ ಪ್ರಯಾಗ ಮತ್ತು ಕಿರಿಕ್ ಪಾರ್ಟಿ 2 ಸಿನಿಮಾದಲ್ಲಿ ರಿಷಬ್ ಬ್ಯುಸಿಯಾಗಿದ್ದಾರೆ. ಅದಾದ ನಂತರ ಈ ಸಿನಿಮಾಗಾಗಿ ಸಿದ್ಧತೆ ನಡೆಯಲಿದೆ.

ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ  ನಂತರ ಬಹಳ ಅಂತರ ಉಂಟಾಯಿತು ಎಂದು ನಾನು ರುದ್ರ ಪ್ರಯಾಗ ಘೋಷಿಸಿದೆ, ಅದರೆ ಕೋವಿಡ್ ಕಾರಣದಿಂದ ವಿಳಂಬವಾಗುತ್ತಿದೆ ಎಂದು ಶೆಟ್ಟಿ ತಿಳಿಸಿದ್ದಾರೆ.

ಕಳೆದ ಲಾಕ್ ಡೌನ್ ಸಮಯದಲ್ಲಿ ಈ ಪ್ರಾಜೆಕ್ಟ್ ಬಗ್ಗೆ ಘೋಷಿಸಲಾಯಿತು, ಆದರೆ ಇದುವರೆಗೂ ಸಾಧ್ಯವಾಗಲಿಲ್ಲ, ಎಲ್ಲರೂ ಲಸಿಕೆ ತೆಗೆದುಕೊಳ್ಳಲಿ ಎಂದು ನಾನು ಕಾಯುತ್ತಿದ್ದೇನೆ, ಕಮಿಟ್ ಮೆಂಟ್ ಗಳನ್ನು ಪೂರ್ಣಗೊಳಿಸಿಕೊಳ್ಳಲು ನಾನು ಕಾಯುತ್ತಿದ್ದೇನೆ, ಅವರ ಪ್ರಾಜೆಕ್ಟ್ ಮುಗಿದ ಕೂಡಲೇ ನಾನು ಕಿರಿಕ್ ಪಾರ್ಟಿ-2 ಕೈಗೆತ್ತಿಕೊಳ್ಳುವುದಾಗಿ ತಿಳಿಸಿದ್ದಾರೆ.

ಮುಂದಿನ 2 ತಿಂಗಳುಗಳಲ್ಲಿ ಈ ಪ್ರಾಜೆಕ್ಟ್ ಆರಂಭಿಸಲು ನಿರ್ದರಿಸಿರುವ ರಿಷಭ್ ಶೆಟ್ಟಿ ಕಲಾವಿದರ ಆಯ್ಕೆ ಪೂರ್ಣಗೊಳಿಸಿದ್ದಾರೆ. ಸಂದೇಶ್ ಪ್ರೊಡಕ್ಷನ್ ನಲ್ಲಿ ನಿರ್ಮಾಣವಾಗುತ್ತಿರುವ ಹರಿಕಥೆ ಅಲ್ಲ ಗಿರಿಕಥೆ ಸಿನಿಮಾ ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.