‘ಕೆಜಿಎಫ್ 2’ ಬಿಡುಗಡೆಗೆ ಮುಹೂರ್ತ ಫಿಕ್ಸ್?
ರಾಕಿಂಗ್ ಸ್ಟಾರ್ ಯಶ್ ನಾಯಕರಾಗಿರುವ ಬಹುನಿರೀಕ್ಷಿತ ಕೆಜಿಎಫ್ 2 ಸಿನಿಮಾ ಬಿಡುಗಡೆಗೆ ಮತ್ತೊಂದು ಮುಹೂರ್ತ ಫಿಕ್ಸ್ ಆಗಿರುವ ಸುದ್ದಿ ಹರಿದಾಡುತ್ತಿದೆ.

ರಾಕಿಂಗ್ ಸ್ಟಾರ್ ಯಶ್ ನಾಯಕರಾಗಿರುವ ಬಹುನಿರೀಕ್ಷಿತ ಕೆಜಿಎಫ್ 2 ಸಿನಿಮಾ ಬಿಡುಗಡೆಗೆ ಮತ್ತೊಂದು ಮುಹೂರ್ತ ಫಿಕ್ಸ್ ಆಗಿರುವ ಸುದ್ದಿ ಹರಿದಾಡುತ್ತಿದೆ.
ಎಲ್ಲಾ ಸರಿ ಹೋಗಿದ್ದರೆ ಜುಲೈನಲ್ಲೇ ಸಿನಿಮಾ ಬಿಡುಗಡೆಯಾಗಬೇಕಿತ್ತು. ಈ ಬಗ್ಗೆ ಚಿತ್ರತಂಡವೂ ಅಧಿಕೃತ ಪ್ರಕಟಣೆ ಹೊರಹಾಕಿತ್ತು. ಆದರೆ ಲಾಕ್ ಡೌನ್ ನಿಂದಾಗಿ ಲೆಕ್ಕಾಚಾರ ತಲೆಕೆಳಗಾಯಿತು.
ಮೂಲಗಳ ಪ್ರಕಾರ ಥಿಯೇಟರ್ ಶೇ.100 ರಷ್ಟು ತೆರೆಯಲು ಅವಕಾಶ ಸಿಕ್ಕರೆ ಮತ್ತು ಕೊರೋನಾ ಮೂರನೇ ಅಲೆ ಇಲ್ಲದೇ ಇದ್ದರೆ ಕೆಜಿಎಫ್ 2 ಸಿನಿಮಾ ಸೆಪ್ಟೆಂಬರ್ 9 ರಂದು ಥಿಯೇಟರ್ ಗೆ ಬರಲಿದೆ. ಈ ಸಿನಿಮಾದ ಒಟಿಟಿ ಹಕ್ಕಿಗಾಗಿ ಅಮೆಝೋನ್ ಪ್ರೈಮ್ ಜೊತೆ ಮಾತುಕತೆ ನಡೆಯುತ್ತಿದೆ ಎಂಬ ಸುದ್ದಿಯಿದೆ. ಈ ಸುದ್ದಿ ತಿಳಿಯುತ್ತಲೇ ಅಭಿಮಾನಿಗಳು ಖುಷಿಯಾಗಿದ್ದಾರೆ.
ಈಗಾಗಲೇ ಸಿನಿಮಾಗಾಗಿ ಕನ್ನಡ, ತೆಲುಗು, ಹಿಂದಿ, ತಮಿಳು, ಮಲಯಾಳಂ ಪ್ರೇಕ್ಷಕರು ಕಾದು ಕುಳಿತಿದ್ದಾರೆ. ಕೆಜಿಎಫ್ 1 ಗಿಂತಲೂ ಕೆಜಿಎಫ್ 2 ಸೂಪರ್ ಹಿಟ್ ಆಗಲಿದೆ ಎಂಬ ಲೆಕ್ಕಾಚಾರ ನಡೆಸಲಾಗಿದೆ. ಇದೇ ಹಿನ್ನಲೆ ಚಿತ್ರವನ್ನು ಒಟಿಟಿ ಬದಲು ಚಿತ್ರಮಂದಿರಗಳಲ್ಲಿಯೇ ಬಿಡುಗಡೆ ನಡೆಸಲು ಚಿತ್ರ ತಂಡ ಚಿಂತನೆ ನಡೆಸಿದೆ. ಕೊರೋನಾ ಸೋಂಕಿನ ಅಲೆ ಕಡಿಮೆಯಾಗುವ ಹಿನ್ನಲೆ ಸೆಪ್ಟೆಂಬರ್ 9ರಂದು ಸಿನಿಮಾ ಥೀಯೇಟರ್ ರಿಲೀಸ್ ಆಗಲಿದೆ ಎಂದಿದ್ದಾರೆ.
‘ಭಜರಂಗಿ 2’ ಬಿಡುಗಡೆಗೆ ಸಿದ್ಧತೆ
ಕೊರೋನಾ ಲಾಕ್ ಡೌನ್ ಈಗಾಗಲೇ ಸಡಿಲಿಕೆಯಾಗಿದ್ದು, ಪರಿಸ್ಥಿತಿ ಮತ್ತಷ್ಟು ಸುಧಾರಿಸಿದಲ್ಲಿ, ಥಿಯೇಟರ್ ಗಳನ್ನು ತೆರೆಯಲೂ ಸರ್ಕಾರ ಗ್ರೀನ್ ಸಿಗ್ನಲ್ ನೀಡಲಿದೆ.
ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ಚಿತ್ರಗಳು ಬಿಡುಗಡೆಗೆ ಕಾದಿದ್ದು, ನಟ ಶಿವರಾಜ್ ಕುಮಾರ್ ಅಭಿನಯದ ‘ಭಜರಂಗಿ 2’ ಕೂಡ ಈ ಸಾಲಿನಲ್ಲಿ ಸೇರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


