ಬಿಗ್ ಬಾಸ್ ಖ್ಯಾತಿಯ ನಯನಾ ಪುಟ್ಟಸ್ವಾಮಿಗೆ ಗಂಡು ಮಗು ಜನನ
ನಟಿ ಹಾಗೂ ಬಿಗ್ ಬಾಸ್ ಖ್ಯಾತಿಯ ನಯನಾ ಪುಟ್ಟಸ್ವಾಮಿ ಅವರ ಮನೆಗೆ ಹೊಸ ಅತಿಥಿ ಆಗಮನವಾಗಿದ್ದು, ನಯನಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ನಟಿ ಹಾಗೂ ಬಿಗ್ ಬಾಸ್ ಖ್ಯಾತಿಯ ನಯನಾ ಪುಟ್ಟಸ್ವಾಮಿ ಅವರ ಮನೆಗೆ ಹೊಸ ಅತಿಥಿ ಆಗಮನವಾಗಿದ್ದು, ನಯನಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆಂದು ತಿಳಿದುಬಂದಿದೆ.
ಈ ಕುರಿತು ಸ್ವತಃ ನಯನಾ ಅವರೇ ಸಾಮಾಜಿಕ ಜಾಲತಾಣ ಇನ್‍ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಇಟ್ ಇಸ್ ಎ ಬಾಯ್ ಎಂದು ಬರೆದುಕೊಂಡು ಮಗುವಿನ ಕೈ ಫೋಟೋ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಗಂಡು ಮಗು ಜನನವಾಗಿರುವುದನ್ನು ತಿಳಿಸಿದ್ದಾರೆ.
ನಯನಾ ಪುಟ್ಟಸ್ವಾಮಿ ಬಿಗ್ ಬಾಸ್ 6 ಹಾಗೂ ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್ ಸೀಸನ್ 1ರ ಮೂಲಕ ಸಹ ಜನಪ್ರಿಯರಾಗಿದ್ದಾರೆ.
ನಯನಾ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದು, ಸಿರಿಯಲ್‍ಗಳಲ್ಲಿ ಕೂಡ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನಯನಾ ಅವರ ಪತಿ ಚರಣ್ ಪೆನ್ಸಿಲ್ವೇನಿಯಾದ ಫಿಲಡೆಲ್ಫಿಯಾದ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿರುವುದಿರಿಂದ ಅಲ್ಲಿಗೇ ಶಿಫ್ಟ್ ಆಗಿದ್ದಾರೆ.
ಇದೇ ವೇಳೆ ಅವರೂ ಸಹ ಫಿಲ್ಮ್ ಮೇಕಿಂಗ್ ಕೋರ್ಸ್ ಮಾಡುತ್ತಿದ್ದಾರೆಂದು ಹೇಳಲಾಗುತ್ತಿದೆ. ಅಲ್ಲದೆ ಭಾರತಕ್ಕೆ ಮರಳಿ ಕನ್ನಡ ಚಿತ್ರರಂಗದಲ್ಲಿ ಸೇವೆ ಮಾಡಬೇಕೆಂಬ ಬಯಕೆಯನ್ನು ಕೂಡ ಈ ಹಿಂದೆ ನಯನಾ ತಿಳಿಸಿದ್ದರು.
ಇತ್ತೀಚೆಗಷ್ಟೇ ನಯನಾ ಅವರು ತಮ್ಮ ಪ್ರಗ್ನೆನ್ಸಿ ವಿಚಾರವನ್ನು ಕೂಡ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರು. ಇದೀಗ ಗಂಡು ಮಗು ಜನನವಾಗಿರುವ ಕುರಿತು ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಸಂತಸದ ವಿಚಾರ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


