ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬ: ಜುಲೈ 2ಕ್ಕೆ ತ್ರಿಬಲ್ ರೈಡಿಂಗ್ ಟೀಸರ್ ರಿಲೀಸ್
ಜುಲೈ 2 ರಂದು ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬವಿದ್ದು, ತಾವು ಸಂಭ್ರಮಾಚರಣೆ ಮಾಡುವ ಮನಸ್ಥಿತಿಯಲ್ಲಿಲ್ಲ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ತಿಳಿಸಿದ್ದರು.

ಜುಲೈ 2 ರಂದು ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬವಿದ್ದು, ತಾವು ಸಂಭ್ರಮಾಚರಣೆ ಮಾಡುವ ಮನಸ್ಥಿತಿಯಲ್ಲಿಲ್ಲ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ತಿಳಿಸಿದ್ದರು.
ಆದರೆ ಅವರ ಅಭಿಮಾನಿಗಳಿಗೆ ನಿರಾಶೆಯಾಗದಂತೆ ಮಾಡಲು ತ್ರಿಬಲ್ ರೈಡಿಂಗ್ ಸಿನಿಮಾ ಟೀಸರ್ ಬಿಡುಗಡೆ ಮಾಡಲು ಚಿತ್ರ ತಂಡ ನಿರ್ಧರಿಸಿದೆ.
ಮಹೇಶ್ ಗೌಡ ನಿರ್ದೇಶನದ ಕಾಮಿಡಿ ಸಿನಿಮಾದಲ್ಲಿ ಗಣೇಶ್ ಗೆ ನಾಯಕಿಯರಾಗಿ ಮೂವರು ನಟಿಸಿದ್ದಾರೆ. ಮೇಘಾ ಶೆಟ್ಟಿ, ರಚನಾ ಇಂದರ್ ಮತ್ತು ಅದಿತಿ ಪ್ರಭುದೇವ ಹೀರೋಯಿನ್ ಗಳಾಗಿದ್ದಾರೆ.
ಚಿತ್ರತಂಡ ಟಾಕಿ ಪೋರ್ಸನ್ ಪೂರ್ಣಗೊಳಿಸಿದ್ದು, ಲಾಕ್ ಡೌನ್ ಗೂ ಮುಂಚೆಯೇ ಒಂದು ಹಾಡಿನ ಶೂಟಿಂಗ್ ಮುಗಿಸಿದ್ದು, ಇನ್ನೂ ಮೂರು ಹಾಡುಗಳ ಚಿತ್ರೀಕರಣ ಬಾಕಿಯಿದೆ.
ಇದರ ಜೊತೆಗೆ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಕೂಡ ಆರಂಭವಾಗಲಿವೆ, ಜುಲೈ 10 ರಿಂದ ಡಬ್ಬಿಂಗ್ ಮಾಡಲು ನಿರ್ದೇಶಕರು ತಯಾರಿ ನಡೆಸಿದ್ದಾರೆ.
ರೀ ರೆಕಾರ್ಡಿಂಗ್ ಮತ್ತು ಡಬ್ಬಿಂಗ್ ಕೆಲಸ ಮಾಡಲು ನಾವು ಯೋಜಿಸಿದ್ದೇವೆ, ಉಳಿದ ಹಾಡುಗಳ ಶೂಟಿಂಗ್ ಗಾಗಿ ಇನ್ನೂ ಲೋಕೇಶನ್ ಫೈನಲ್ ಮಾಡಿಲ್ಲ ಎಂದು ನಿರ್ದೇಶಕ ಮಹೇಶ್ ಗೌಡ ತಿಳಿಸಿದ್ದಾರೆ.
ಈ ವರ್ಷದಲ್ಲಿ ಗಣೇಶ್ ನಟನೆಯ ಮೊದಲ ಸಿನಿಮಾ ರಿಲೀಸ್ ಆಗುತ್ತಿದೆ. ತ್ರಿಬಲ್ ರೈಡಿಂಗ್ ಜೊತೆಗೆ ಗಣೇಶ್ ಗಾಳಿಪಟ2, ಮತ್ತು ಸಖತ್ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


