ಸಿನಿಮಾ ಸುದ್ದಿ

ನಿರ್ದಯವಾಗಿ ಲಾಠಿಯಲ್ಲಿ ಹೊಡೆಯಬೇಡಿ, ನಟ ಜಗ್ಗೇಶ್ ಪೊಲೀಸರಿಗೆ ಮನವಿ

ಕೋವಿಡ್‌ ಎರಡನೇ ಅಲೆ ನಿಯಂತ್ರಿಸಲು ನಾಳೆಯಿಂದ ರಾಜ್ಯಾದ್ಯಂತ 14 ದಿನಗಳ ಕಾಲ ಲಾಕ್‌ಡೌನ್‌ ಅನ್ನು ರಾಜ್ಯ ಸರ್ಕಾರ ಘೋಷಿಸಿದೆ. ಈ ನಿಮಿತ್ಯ ಸ್ಯಾಂಡಲ್ ವುಡ್ ನಟ ನವರಸ ನಾಯಕ ಜಗ್ಗೇಶ್‌, ಪೊಲೀಸ್‌ ಇಲಾಖೆ ಮುಖ್ಯಸ್ಥರಿಗೆ ಮನವಿಯೊಂದನ್ನು ಮಾಡಿದ್ದಾರೆ.

ನಿರ್ದಯವಾಗಿ ಲಾಠಿಯಲ್ಲಿ ಹೊಡೆಯಬೇಡಿ, ನಟ ಜಗ್ಗೇಶ್ ಪೊಲೀಸರಿಗೆ ಮನವಿ
ನಟ ಜಗ್ಗೇಶ್
Published On :

ಬೆಂಗಳೂರು: ಕೋವಿಡ್‌ ಎರಡನೇ ಅಲೆ ನಿಯಂತ್ರಿಸಲು ನಾಳೆಯಿಂದ ರಾಜ್ಯಾದ್ಯಂತ 14 ದಿನಗಳ ಕಾಲ ಲಾಕ್‌ಡೌನ್‌ ಅನ್ನು ರಾಜ್ಯ ಸರ್ಕಾರ ಘೋಷಿಸಿದೆ. ಈ ನಿಮಿತ್ಯ ಸ್ಯಾಂಡಲ್ ವುಡ್ ನಟ ನವರಸ ನಾಯಕ ಜಗ್ಗೇಶ್‌, ಪೊಲೀಸ್‌ ಇಲಾಖೆ ಮುಖ್ಯಸ್ಥರಿಗೆ ಮನವಿಯೊಂದನ್ನು ಮಾಡಿದ್ದಾರೆ. 

ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಜಗ್ಗೇಶ್, ‘ರಾಜ್ಯದ ಆರಕ್ಷಕ ಇಲಾಖೆಯ ಮುಖ್ಯಸ್ಥರಿಗೆ ವಿನಂತಿ. ಸರ್ಕಾರ ಹಾಗೂ ತಮ್ಮ ಆದೇಶ ಪಾಲಿಸದವರಿಗೆ  ದಂಡ ಹಾಕಿ ವಾಹನ ಜಪ್ತಿ ಮಾಡಿದರೆ ತೊಂದರೆ ಇಲ್ಲ. ಆದರೆ ನಿರ್ದಯವಾಗಿ ಲಾಠಿಯಲ್ಲಿ ಹೊಡೆಯಬೇಡಿ. ಯುವಕರಾದರೆ ಪರವಾಗಿಲ್ಲಾ ತಡೆಯುತ್ತಾರೆ. ಆದರೆ ವಯಸ್ಸಾದವರು ಪಾಪ ಯಾವ ಕಾಯಿಲೆ ಇರುತ್ತದೆ ನಿಮಗೇನು ತಿಳಿದಿರುತ್ತದೆ.ಕೆಲ ಅಧಿಕಾರಿಗಳು ಒಂದು ಏಟುಕೊಟ್ಟು ಭಯಪಡಿಸುವ  ಬದಲು ಪ್ರಾಣಹೋಗುವಂತೆ ಹೊಡೆಯುತ್ತಾರೆ ಎಂದಿದ್ದಾರೆ.

ಈ ಹಾಳಾದ ಕೊರೋನಾ ಮನುಕುಲದ ಅನ್ನ ದುಡಿಮೆ ನೆಮ್ಮದಿಯನ್ನು ಕಸಿದಿದೆ. ಮನುಷ್ಯರಾಗಿ ನಾವು ಮನುಷ್ಯತ್ವ ಪಾಲಿಸುವ. ಜನತೆಯಲ್ಲಿ ಒಂದು ಮನವಿ, ಈ ರೋಗ ಮನುಕುಲದ ಸಾವಿಗಾಗಿಯೇ ಬಂದಿದೆ. ದಯಮಾಡಿ ಸ್ವಲ್ಪ ದಿನ ವೈದ್ಯಲೋಕದ ಮಾತಿನಂತೆ ಕೆಲ ತಿಂಗಳು ಎಚ್ಚರವಾಗಿ ಇದ್ದುಬಿಡಿ’ ಎಂದು ಅವರು ಉಲ್ಲೇಖಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.