ಕೊಡಗು: ಕೋವಿಡ್-19 ಸಂಕಷ್ಟದಲ್ಲಿರುವವರಿಗೆ ನಟ ಭುವನ್ ಪೊನ್ನಣ್ಣ ನೆರವಿನ ಹಸ್ತ
ಕೊರೋನಾ ಎರಡನೇ ಅಲೆಯಿಂದ ಹಲವಾರು ಮಂದಿ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಈ ಮಧ್ಯೆ ಸ್ಯಾಂಡಲ್ವುಡ್ ಕಲಾವಿದ ನಟ ಭುವನ್ ಪೊನ್ನಣ್ಣ ಕೊಡಗಿನ ಜನರಿಗೆ ಸಹಾಯ ಮಾಡುತ್ತಿದ್ದಾರೆ.

ಮಡಿಕೇರಿ: ಕೊರೋನಾ ಎರಡನೇ ಅಲೆಯಿಂದ ಹಲವಾರು ಮಂದಿ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಈ ಮಧ್ಯೆ ಸ್ಯಾಂಡಲ್ವುಡ್ ಕಲಾವಿದ ನಟ ಭುವನ್ ಪೊನ್ನಣ್ಣ ಕೊಡಗಿನ ಜನರಿಗೆ ಸಹಾಯ ಮಾಡುತ್ತಿದ್ದಾರೆ.
ನಟ ಭುವನ್ ಪೊನ್ನಣ್ಣ ಕೊರೋನಾ ವಾರಿಯರ್ ಆಗಿ ಜನಸೇವೆಗೆ ಧುಮುಕಿದ್ದಾರೆ. ಭುವನ್ ಪೊನ್ನಣ್ಣ ಅವರ ನಾಲ್ಕು ವರ್ಷದ 'ಭುವನಂ ಫೌಂಡೇಶನ್ ಎಂಬ ಟ್ರಸ್ಟ್ ಆರಂಭಿಸಿ ಸೋಂಕಿತರಿಗೆ ನೆರವನ್ನು ನೀಡುತಿದ್ದಾರೆ. ಈ ಲಾಕ್ ಡೌನ್ ಸಂದರ್ಭದಲ್ಲಿ ಫೌಂಡೇಷನ್ ಮೂಲಕ ಕೊಡಗಿನ ಜನರ ನೆರವಿಗೆ ನಿಂತಿದ್ದಾರೆ.
ಬಡವರು, ನಿರ್ಗತಿಕರಿಗೆ ಹದಿನೈದು ದಿನಗಳಿಗೆ ಆಗುವಷ್ಟು ಸುಮಾರು 200 ಆಹಾರ ಪದಾರ್ಥಗಳ ಕಿಟ್ ಗಳನ್ನು ವಿತರಣೆ ಮಾಡಿದ್ದಾರೆ. ಎರಡು ವಾರಗಳ ಕಾಲ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸಲಿರುವ 'ಭುವನಂ ಫೌಂಡೇಷನ್'ಗೆ ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ನಲ್ಲಿ ಚಾಲನೆ ನೀಡಲಾಯಿತು. ಸ್ಥಳೀಯರಿಗೆ ಮತ್ತು ಹೋಂ ಗಾರ್ಡ್ಗಳಿಗೆ ಆಹಾರ ಪದಾರ್ಥಗಳ ಕಿಟ್ ಮತ್ತು ಮಾಸ್ಕ್ ಅನ್ನು ನಟ ಭುವನ್ ವಿತರಣೆ ಮಾಡಿದ್ದಾರೆ.
ಈ ಸಂದರ್ಭ ಮಡಿಕೇರಿ ನಗರ ಸಭೆ ಆಯುಕ್ತ ರಾಮದಾಸ್ ಜೊತೆಗಿದ್ದು, ನಗರದಲ್ಲಿ ಆಹಾರ ಪದಾರ್ಥಗಳ ಕಿಟ್ ಬೇಕಾಗಿರುವ ಏರಿಯಾಗಳಿಗೆ ಕರೆದೊಯ್ದು ಖುದ್ದು ನಿಂತು ಆಹಾರ ಪದಾರ್ಥಗಳನ್ನು ವಿತರಣೆ ಮಾಡಿಸಿದರು. ಈ ಸಂದರ್ಭ ಮಾತನಾಡಿದ ಭುವನ್ ಜಿಲ್ಲೆಯು ಗುಡ್ಡಗಾಡು ಪ್ರದೇಶವಾಗಿರುವುದರಿಂದ ಔಷಧಿ ಕೊಳ್ಳಲು 15, 20 ಕಿಲೋಮೀಟರ್ ಹೋಗಬೇಕಾಗಿದೆ. ಇನ್ನು ಕೋವಿಡ್ ಎಂದ ಕೂಡಲೇ ಯಾರೂ ಆಟೋದವರು ಬರುವುದಿಲ್ಲ. ಹೀಗಾಗಿಯೇ ನಮ್ಮದೇ ತಂಡ ಇಂತಹವರ ನೆರವಿಗೆ ಧಾವಿಸಲಿದೆ. ಅಲ್ಲದೆ ಆಹಾರ ಪದಾರ್ಥಗಳು ಬೇಕಾದಲ್ಲಿ ಒದಗಿಸಲಿದೆ ಎಂದರು. ನಟಿ ಹರ್ಷಿಕಾ ಪೂಣಚ್ಚ, ಕೊಡಗಿನಲ್ಲಿ ನೆರೆ ಆಗುತ್ತಿದ್ದಂತೆ ಫೀಡ್ ಕರ್ನಾಟಕ ಆರಂಭಿಸಿದ್ದೇವೆ. ಕೊಡಗಿನ ಜನರಿಗೆ ಔಷಧಿ ಅಗತ್ಯ ಇರುವುದರಿಂದ ಸೇವೆಯನ್ನು ಒದಗಿಸಲಿದ್ದೇವೆ ಎಂದು ಹೇಳಿದ್ದಾರೆ.
ನೆರವು ಬೇಕಾದವರು ತಮ್ಮನ್ನು ಸಂಪರ್ಕಿಸಬೇಕೆಂದು ಭುವನ್ ಮೊಬೈಲ್ ನಂಬರ್ (9945008004) ನೀಡಿದ್ದಾರೆ. ಗೋಣಿಕೊಪ್ಪ, ವಿರಾಜ ಪೇಟೆಯಲ್ಲಿ ಮೇ 25 ಮತ್ತು ಮೇ 26 ರಂದು ಅಗತ್ಯವಿರುವವರಿಗೆ ಫುಡ್ ಕಿಟ್ ವಿತರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


