'ಮಳೆಯಲಿ ಜೊತೆಯಲಿ' ನಟಿ ಯುವಿಕಾ ಚೌಧರಿ ವಿರುದ್ಧ ಹರಿಯಾಣ ಪೋಲೀಸರಿಂದ ಎಫ್‌ಐಆರ್!
ಸಾಮಾಜಿಕ ತಾಣದಲ್ಲಿ ವೈರಲ್ ಆಗಿರುವ ವಿಡಿಯೋವೊಂದರಲ್ಲಿ ಜಾತಿ/ಸಮುದಾಯಕ್ಕೆ ಸೇರಿದ ಪದವನ್ನು ಬಳಸಿ ಅವಮಾನಿಸಿದ್ದಾರೆಂದು ಆರೋಪದ ಮೇಲೆ ಗಣೇಶ್ ಅಭಿನಯದ 'ಮಳೆಯಲಿ ಜೊತೆಯಲಿ' ಚಿತ್ರದಲ್ಲಿ ಅಭಿನಯಿಸಿದ್ದ ನಟಿ ಯುವಿಕಾ ಚೌಧರಿ ವಿರುದ್ಧ ಹರಿಯಾಣ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಸಾಮಾಜಿಕ ತಾಣದಲ್ಲಿ ವೈರಲ್ ಆಗಿರುವ ವಿಡಿಯೋವೊಂದರಲ್ಲಿ ಜಾತಿ/ಸಮುದಾಯಕ್ಕೆ ಸೇರಿದ ಪದವನ್ನು ಬಳಸಿ ಅವಮಾನಿಸಿದ್ದಾರೆಂದು ಆರೋಪದ ಮೇಲೆ ಗಣೇಶ್ ಅಭಿನಯದ 'ಮಳೆಯಲಿ ಜೊತೆಯಲಿ' ಚಿತ್ರದಲ್ಲಿ ಅಭಿನಯಿಸಿದ್ದ ನಟಿ ಯುವಿಕಾ ಚೌಧರಿ ವಿರುದ್ಧ ದಲಿತ ಹಕ್ಕುಗಳ ಕಾರ್ಯಕರ್ತರೊಬ್ಬರು ನೀಡಿದ ದೂರಿನ ಮೇರೆಗೆ ಹರಿಯಾಣ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಶುಕ್ರವಾರ ಸಂಜೆ ಪೊಲೀಸರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ನಟಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿಡಿಯೋದಲ್ಲಿ ನಟಿ ಪರಿಶಿಷ್ಟ ಜಾತಿ. ಸಮುದಾಯದ ಬಗ್ಗೆ ಕೆಲವು ಅವಹೇಳನಕಾರಿ ಮತ್ತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದಲಿತ ಹಕ್ಕುಗಳ ಕಾರ್ಯಕರ್ತ ರಜತ್ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ, ಅದರ ಪ್ರತಿಯನ್ನು ಅವರು ಪೊಲೀಸರಿಗೆ ಒಪ್ಪಿಸಿದ್ದಾ ಈ ಸಂಬಂಧ ಮೇ 26 ರಂದು ಹನ್ಸಿ ಪೊಲೀಸ್ ವರಿಷ್ಠಾಧಿಕಾರಿ ನಿಕಿತಾ ಅಹ್ಲಾವತ್ ಅವರಿಗೆ ದೂರು ನೀಡಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಜಾತಿವಾದಿ ನಿಂದನಾತ್ಮಕ ಪದ ಬಳಸಿದ ಆರೋಪದ ಚೌಧರಿಯ ವಿಡಿಯೋ ಮೇ 25 ರಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗುತ್ತು.
ಇನ್ನು ಈ ಬಗ್ಗೆ ಕ್ಷಮೆಯಾಚಿಸಿರುವ ನಟಿ "ನನಗೆ ಆ ಪದದ ಹಿನ್ನೆಲೆ ತಿಳಿದಿರಲಿಲ್ಲ. ಎಂದು ಹೇಳಿ ಎರಡೂ ಕೈ ಮುಗಿದು ಕ್ಷಮೆ ಬೇಡಿದ್ದಾರೆ. ನಟಿ ಕ್ಷಮೆ ಕೇಳಿದ ವಿಡಿಯೋವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


