ಸಿನಿಮಾ ಸುದ್ದಿ

ಅಂಬಿ ನೆನಪು ಅಜರಾಮರ ; ರೆಬೆಲ್ ಸ್ಟಾರ್ ಜನ್ಮದಿನದಂದು ಪತಿಯನ್ನು ನೆನೆದ ಸುಮಲತಾ, ದರ್ಶನ್, ಸುದೀಪ್ ಟ್ವೀಟ್

ರೆಬೆಲ್ ಸ್ಟಾರ್ ಅಂಬರೀಶ್ ಹುಟ್ಟುಹಬ್ಬದಂದು ಸಂಸದೆ, ನಟಿ ಸುಮಲತಾ ಪತಿಯನ್ನು ನೆನೆದು ಭಾವುಕರಾಗಿದ್ದಾರೆ.

ಅಂಬಿ ನೆನಪು ಅಜರಾಮರ ; ರೆಬೆಲ್ ಸ್ಟಾರ್ ಜನ್ಮದಿನದಂದು ಪತಿಯನ್ನು ನೆನೆದ ಸುಮಲತಾ, ದರ್ಶನ್, ಸುದೀಪ್ ಟ್ವೀಟ್
ಅಂಬರೀಶ್, ಸುಮಲತಾ
Published On :

ರೆಬೆಲ್ ಸ್ಟಾರ್ ಅಂಬರೀಶ್ ಹುಟ್ಟುಹಬ್ಬದಂದು ಸಂಸದೆ, ನಟಿ ಸುಮಲತಾ ಪತಿಯನ್ನು ನೆನೆದು ಭಾವುಕರಾಗಿದ್ದಾರೆ.

'ಅಜರಾಮರ ನೆನಪುಗಳು, ಚಿರಂತನ ಚೈತನ್ಯ, ಅಪಾರ ಅಕ್ಕರೆ, ಸಂಜೀವಿನಿ ಸ್ನೇಹ, ಎಲ್ಲರನ್ನೂ ಎಲ್ಲವನ್ನೂ ಪ್ರೀತಿಸಿ ಹೃದಯವಂತಿಕೆ ಶಾಶ್ವತ ನಲ್ಮೆ, ಧನ್ಯ ಬದುಕು'' ಎಂದು ಟ್ವೀಟ್ ಮೂಲಕ ಪತಿಯನ್ನು ಸ್ಮರಿಸಿದ್ದಾರೆ.

ನಿಮ್ಮನ್ನು ನಿಜಕ್ಕೂ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಕಿಚ್ಚ ಸುದೀಪ್ ಅಂಬಿ ಮಾಮನನ್ನು ಸ್ಮರಿಸಿದ್ದಾರೆ.

"ಎಂದಿಗೂ ಮಾಸದ ಅಂಬಿ ಅಪ್ಪಾಜಿಯ ಸವಿನೆನಪು. ಅವರ ಭಾಷಾಭಿಮಾನ, ಖಡಕ್ ಜೀವನ ಶೈಲಿ ಎಲ್ಲರಿಗೂ ಸ್ಫೂರ್ತಿಯಾಗಿರುತ್ತದೆ.  ಮತ್ತೊಮ್ಮೆ ಕರುನಾಡಲ್ಲೇ ಹುಟ್ಟಿಬರಲಿ ನಮ್ಮ ನೆಚ್ಚಿನ ಮಂಡ್ಯದ ಗಂಡು" ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹ ಅಂಬರೀಶ್ ಅವರನ್ನು ನೆನೆದಿದ್ದಾರೆ.

ಡಾ. ರಾಜ್, ವಿಷ್ಣುವರ್ಧನ್ ಬಳಿಕ ಚಿತ್ರರಂಗಕ್ಕೆ ದೊಡ್ಡಣ್ಣನಂತಿದ್ದ ಅಂಬರೀಶ್ ೨೦೧೮ರ ನವೆಂಬರ್ ನಲ್ಲಿ ನಿಧನರಾದರು. ಅಂಬಿ ಇಲ್ಲದ ಮೂರನೇ ಜನ್ಮದಿನ ಇದಾಗಿದ್ದು ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನನ್ನು ನೆನಪಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.